ಮಂಡ್ಯ

ಅಸ್ಥಿ ವಿಸರ್ಜನೆಯಿಂದ ಕಾವೇರಿ ಮಲಿನ : ಸೂಕ್ತ ಕ್ರಮಕ್ಕೆ ಮನವಿ

ಸೂಕ್ತ ಕ್ರಮಕ್ಕೆ ಹಿಂದೂಜಾಗರಣ ವೇದಿಕೆ ಕಾರ್ಯಕರ್ತರ ಮನವಿ

ಶ್ರೀರಂಗಪಟ್ಟಣ:  ಪಟ್ಟಣದ ಸ್ನಾನಘಟ್ಟ ಕಾವೇರಿ ನದಿ ತೀರ ಪ್ರದೇಶಗಳಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜನೆ ಕಾರ್ಯ ನಡೆಸಿ, ಕಾವೇರಿ ನದಿ ನೀರಿಗೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲಿನಗೊಳಿಸಲಾಗುತ್ತಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಪುರಾತನ ಕಾಲದಲ್ಲಿ ವಿಸರ್ಜಿಸುತ್ತಿದ್ದ ಸ್ಥಳಗಳಲ್ಲೇ ಸ್ಥಳಾವಕಾಶ ಮಾಡಿ, ಸ್ವಚ್ಚತೆ ಕಾಪಾಡುವಂತೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪುರಸಭೆ ಕಚೇರಿಗೆ ಹಿಂದೂ ಜಾಗರಣಾ ವೇದಿಕೆ ಸಂಚಾಲಕ ಚಂದನ್ ನೇತೃತ್ವದಲ್ಲಿ ಕಾರ್ಯಕರ್ತರು ಭೇಟಿ ನೀಡಿ, ಮುಖ್ಯಾಧಿಕಾರಿ ಎಂ.ರಾಜಣ್ಣ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣದ ಪುರಸಭೆ ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ ಎಲ್ಲೆಂದರಲ್ಲಿ ಅಸ್ಥಿ ವಿಸರ್ಜಿಸಿ, ನದಿ ನೀರು ಮಲಿನದ ಜೊತೆ ತ್ಯಾಜ್ಯ ವಸ್ತುಗಳ ನದಿಯಲ್ಲಿ ಬಿಟ್ಟು ಮಲಿನಗೊಳಿಸಲಾಗುತ್ತಿದೆ. ಕಾವೇರಿ ನದಿ ತೀರದ ಜಮೀನುಗಳಲ್ಲಿ ಅಕ್ರಮವಾಗಿ ಅಸ್ಥಿ ಪೂಜಾ ಶೆಡ್‌ಗಳ ನಿರ್ಮಿಸಿ ಧಾರ್ಮಿಕ ಕಾರ್ಯಕ್ಕೆ ಬಂದವರಿಂದ ವಸೂಲಾತಿ ನಡೆಯುತ್ತಿದೆ. ಕೂಡಲೇ ಅವುಗಳನ್ನು ತೆರವು ಮಾಡಿ ಧಾರ್ಮಿಕ ಕಾರ್ಯಕ್ಕೆ ಬರುವವರಿಗೆ ಅನುಕೂಲಗಳ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜೊತೆಗೆ ಪುರಸಭೆ ವತಿಯಿಂದಲೇ ಪೂರ್ವಾಧಿ ಕಾಲದಿಂದ ನಡೆದು ಬಂದ, ಪಶ್ಚಿಮವಾಹಿನಿ ಹಾಗೂ ಕಾವೇರಿ ಸಂಗಮ ಸ್ಥಳದಲ್ಲೇ ಅಸ್ಥಿ ವಿಸರ್ಜನೆಗೆ ಜಾಗ ಕಲ್ಪಿಸಿ, ಆ ಸ್ಥಳದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಅಲ್ಲದೆ ನಿಮ್ಮ ಸಿಬ್ಬಂದಿಗಳ ನೇಮಕ ಮಾಡಿ ನದಿಗೆ ತ್ಯಾಜ್ಯಗಳು, ಬಟ್ಟೆಗಳನ್ನು ನದಿಯಲ್ಲಿ ವಿಸರ್ಜಿಸದಂತೆ ನೋಡಿಕೊಳ್ಳಬೇಕು. ಇದರ ಜೊತೆ ನುರಿತ ಧಾರ್ಮಿಕ ಕ್ರಿಯಾ ಪೂಜೆ ನಡೆಸುವ ಪುರೋಹಿತರನ್ನು ನೇಮಕ ಮಾಡಿ, ಅವರಿಗೆ ಗುರುತಿನ ಪತ್ರ ನೀಡಿ, ಅಸ್ಥಿ ವಿಸರ್ಜನೆಗೆ ಇಂತಿಷ್ಟು ಶುಲ್ಕ ನಿಗಧಿ  ಮಾಡಿ ರಶೀದಿ ಹಾಕಿ ಪುರಸಭೆಗೆ ಆದಾಯ ಬರುವಂತೆ ನೋಡಿಕೊಳ್ಳಬೇಕು ಎಂದು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಬಳಿಕ ಮುಖ್ಯಾಧಿಕಾರಿ ಎಂ.ರಾಜಣ್ಣ ಮಾತನಾಡಿ, ಕಾವೇರಿ ನದಿಗೆ ಅನುಪಯುಕ್ತ ವಸ್ತುಗಳು ಸೇರಿದಂತೆ ಅಸ್ಥಿ ವಿರ್ಜನೆ ಜೊತೆ ತ್ಯಾಜ್ಯಗಳ ಬಿಟ್ಟು ನದಿ ನೀರು ಮಲೀನ ಕುರಿತು ಅದರ ಸಂರಕ್ಷಣೆ ವಿಷಯವಾಗಿ ಹೈಕೋರ್ಟ್‌ನಲ್ಲಿ ಕುಶಾಲ್ ಕುಮಾರ್ ಕೌಶಿಕ್ ಮತ್ತಿತರರು ರಿಟ್ ಅರ್ಜಿ ಸಲ್ಲಿದ್ದಾರೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ಮಂಡ್ಯ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಅಧ್ಯಕ್ಷತೆಯಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಮಾರ್ಗದರ್ಶನದಲ್ಲಿ ತಹಸಿಲ್ದಾರ್, ಪುರಸಭೆ ಅಧ್ಯಕ್ಷರು, ಸದಸ್ಯರ ಸಭೆಯನ್ನು ಸಹ ನಡೆಸಲಾಗಿದೆ. ಈ ಸಮಸ್ಯೆ ಪರಿಹರಿಸಲು ನದಿ ಮಲಿನವನ್ನು ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಲು ರೂಪು ರೇಷೆಗಳ ರೂಪಿಸಿದ್ದು, ಸಾರ್ವಜನಿಕರ ಸಲಹೆ ಸೂಚನೆಗಳಿಗೂ ಒಂದು ತಿಂಗಳು ಅವಕಾಶ ನೀಡಲಾಗಿದೆ. ನಂತರ ಯಾವುದೇ ಸಮಸ್ಯೆಗಳು ಬಾರದಂತೆ ಬರುವ ಪ್ರವಾಸಿಗರು ಧಾರ್ಮಿಕ ಕಾರ್ಯ ನಡೆಸುವರಿಗೆ ಮೂಲ ಭೂತ ಸೌಕರ್ಯಗಳಿಗೆ ಒತ್ತು ನೀಡಲು ಡಿಪಿಆರ್ ಸಿದ್ಧತೆ ಮಾಡಿ ಸರ್ಕಾರದ ಗಮನಕ್ಕೆ ತಂದ ನಂತರ ಕಾರ್ಯರೂಪಗೊಳಿಸಲಾಗುತ್ತದೆ ಎಂದರು.

ಈ ವೇಳೆ ಲಕ್ಷ್ಮಿನಾರಾಯಣ, ರಾಘು, ಚೇತನ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

8 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

21 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

27 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

1 hour ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

3 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

3 hours ago