ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಮಂಡ್ಯ: ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿದ್ದು, ನದಿ ಕಲುಷಿತಗೊಳ್ಳುತ್ತಿದೆ. ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ. ಹೀಗಾಗಿ ಅಸ್ತಿ ವಿಸರ್ಜನೆಗೆ ವೈಜ್ಞಾನಿಕ ವರದಿ ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ ಹೇಳಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ವೈಜ್ಞಾನಿಕವಾಗಿ ವಿಸರ್ಜನೆ ಮಾಡುವ ಕುರಿತು ಅಧಿಕಾರಿಗಳ ಸಮಿತಿ ರಚಿಸಿದ್ದು, ನೈಸರ್ಗಿಕವಾಗಿ ವಿಘಟವಾಗುವ ರೀತಿ ಅಸ್ತಿ ವಿಸರ್ಜನೆಗೆ ಬೇಕಿರುವ ಯಂತ್ರಗಳ ಕುರಿತಂತೆ ತಾಂತ್ರಿಕ ತಜ್ಙರಿಂದ ವರದಿ ಪಡೆದು ಡಿ.ಪಿ.ಆರ್ ಸಿದ್ಧಪಡಿಸುವಂತೆ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣ, ಶ್ರೀರಂಗಪಟ್ಟಣ ನಗರಸಭೆ ಆಯುಕ್ತ ರಾಜಣ್ಣ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು