ಮಂಡ್ಯ

ಕಾವೇರಿ ನದಿ ; ಅಸ್ತಿ ವಿಸರ್ಜನೆಗೆ ವೈಜ್ಞಾನಿಕ ವರದಿ

ಸಭೆಯಲ್ಲಿ  ಜಿಲ್ಲಾಧಿಕಾರಿ ಸೂಚನೆ 

ಮಂಡ್ಯ:  ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿದ್ದು, ನದಿ ಕಲುಷಿತಗೊಳ್ಳುತ್ತಿದೆ.  ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ. ಹೀಗಾಗಿ ಅಸ್ತಿ ವಿಸರ್ಜನೆಗೆ ವೈಜ್ಞಾನಿಕ ವರದಿ ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ ಡಾ: ಕುಮಾರ  ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ವೈಜ್ಞಾನಿಕವಾಗಿ ವಿಸರ್ಜನೆ ಮಾಡುವ ಕುರಿತು ಅಧಿಕಾರಿಗಳ ಸಮಿತಿ ರಚಿಸಿದ್ದು, ನೈಸರ್ಗಿಕವಾಗಿ ವಿಘಟವಾಗುವ ರೀತಿ ಅಸ್ತಿ ವಿಸರ್ಜನೆಗೆ ಬೇಕಿರುವ ಯಂತ್ರಗಳ ಕುರಿತಂತೆ ತಾಂತ್ರಿಕ ತಜ್ಙರಿಂದ ವರದಿ ಪಡೆದು ಡಿ.ಪಿ.ಆರ್ ಸಿದ್ಧಪಡಿಸುವಂತೆ ತಿಳಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣ, ಶ್ರೀರಂಗಪಟ್ಟಣ ನಗರಸಭೆ ಆಯುಕ್ತ ರಾಜಣ್ಣ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು ‌

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

23 mins ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

59 mins ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

1 hour ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

2 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

3 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

3 hours ago