ಮಂಡ್ಯ

ತಮಿಳುನಾಡಿಗೆ ಕಾವೇರಿ : ಮಂಡ್ಯದಲ್ಲಿ ತಲೆಮೇಲೆ ಕಲ್ಲು ಹೊತ್ತು ಪ್ರತಿಭಟನೆ

ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸೇನೆ ಕಾರ್ಯಕರ್ತರು ತಲೆ ಮೇಲೆ ಕಲ್ಲು ಹೊತ್ತು ಮಂಡ್ಯ ನಗರದಲ್ಲಿ ಭಾನುವಾರ ಪ್ರತಿಭಟಿಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ತಲೆ ಮೇಲೆ ಕಲ್ಲು ಹೊತ್ತು ಧರಣಿ ನಡೆಸಿದ ಸೇನೆಯ ಕಾರ್ಯಕರ್ತರು ಕಾವೇರಿ ಹೋರಾಟಕ್ಕೆ ಇಳಿಯದ ಜಿಲ್ಲೆಯ ಶಾಸಕರು ಮತ್ತು ಸಂಸದರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದರು.

ಮಂಡ್ಯ ಜಿಲ್ಲೆಯ ಶಾಸಕರು, ಸಂಸದರು ಕಾವೇರಿ ನೀರು ಉಳಿವಿಗಾಗಿ ಬೀದಿಗಿಳಿದು ಹೋರಾಟ ಮಾಡಬೇಕು, ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು, ಈಗಾಗಲೇ ನೆರೆ ರಾಜ್ಯಕ್ಕೆ 18 ಟಿಎಂಸಿ ನೀರು ಹರಿದು ಹೋಗಿದ್ದು ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಮಂಡ್ಯ ಜಿಲ್ಲೆಗೆ 100 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು, ರೈತರ ಹಿತ ಕಡೆಗಣಿಸಿ ನೀರು ಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮಹಾಂತಪ್ಪ, ಶಿವಾಲಿ, ನಂದೀಶ್, ಮಂಜುನಾಥ್ ಬೆಟ್ಟಳ್ಳಿ, ಅರಕೆರೆ ರಘು, ಗುತ್ತಲು ಚಂದ್ರು, ಜಯಮ್ಮ, ದರ್ಶನ್, ರಾಜೇಶ್, ನಂದೀಶ್ ಇತರರು ಭಾಗವಹಿಸಿದ್ದರು.

lokesh

Recent Posts

ಗುರುವಾರ ಅಮೇರಿಕಾ-ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆ

ಇಸ್ಲಾಮಾಬಾದ್:‌ ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್‌ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…

9 mins ago

ಇಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಜಯಂತಿ: ಗಣ್ಯಾತಿಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ಅಂಬೇಡ್ಕರ್‌ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…

49 mins ago

ರೈತಾಪಿ ವರ್ಗಕ್ಕೆ ಬಿಗ್‌ ಶಾಕ್‌ ಕೊಟ್ಟ ಹವಾಮಾನ ಇಲಾಖೆ: ಏನದು ಗೊತ್ತಾ.?

ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…

1 hour ago

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್‌ ಅಹಮ್ಮದ್‌ ರಾಜೀನಾಮೆ

ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್‌ ಅಹಮ್ಮದ್‌ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್‌ ಅಹಮ್ಮದ್‌ ಅವರು ಸಿಎಂ…

2 hours ago

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

5 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

5 hours ago