ಮಂಡ್ಯ : ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ. ಅದರಂತೆ ಸರ್ಕಾರ ಹೆಚ್ಚುವರಿ ನೀರನ್ನು ಹರಿಸುತ್ತಿದ್ದು, ಈ ಹಿನ್ನಲೆ ರೈತರು ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ರೈತಸಂಘದ ಕಾರ್ಯಕರ್ತರು ಸೇರಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಬಳಿ ಕಾವೇರಿ ನದಿಗೆ ಇಳಿದು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
ಇತ್ತ ಕಾವೇರಿಗಾಗಿ ಎಚ್.ಡಿ.ದೇವೇಗೌಡರು ಪೂಜೆ ಮಾಡುತ್ತಿದ್ದಾರೆ ಎಂದು ಮಂಡ್ಯದಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರನ್ನು ಉಳಿಸುವುದಿಲ್ಲ. ನೀನು ಹೋರಾಟಕ್ಕೆ ಹೋಗಿ ಎಂದು ನನ್ನನ್ನು ಕಳುಹಿಸಿದ್ದಾರೆ. ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡುತ್ತೇವೆ ಅಂತೀರಾ?. ನಿಮಗೆ ಹಾಗೇ ಹೇಳುವ ಅಧಿಕಾರ ಕೊಟ್ಟವರು ಯಾರು?, ಸಂಕಷ್ಟದ ಬಗ್ಗೆ ಮೊದಲೇ ಪ್ರಾಧಿಕಾರಕ್ಕೆ ಯಾಕೆ ಮನವಿ ಮಾಡಲಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಕಾಂಗ್ರೆಸ್ನವರು 5 ಗ್ಯಾರಂಟಿ ಶಿವ ಅಂತೀರಾ, ಲಿಕ್ಕರ್ಗೆ 30 ರೂಪಾಯಿ ಜಾಸ್ತಿ ಮಾಡಿದ್ದೀರಲ್ಲ ಶಿವ ಎಂದು ರಾಜ್ಯ ಸರ್ಕಾರವನ್ನು ಕುಟುಕಿದ್ದಾರೆ. ಈ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ನೀರು ನಿಲ್ಲಿಸೋಕೆ ನಿಮಗೆ ಧೈರ್ಯವಿಲ್ವಾ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ ಜಿಟಿಡಿ, ಜೈಲಿಗೆ ಹೋದರೂ ಪರವಾಗಿಲ್ಲ ನೀರು ನಿಲ್ಲಿಸಿ, ರೈತರ ಪರ ನಿಲ್ಲಿ ಎಂದಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…