ಮಂಡ್ಯ

ಬಿಜೆಪಿ ಮುಖಂಡ ಕೆ.ಸಿ ನಾರಾಯಣ ಗೌಡ ಕಾಂಗ್ರೆಸ್‌ ಸೇರಲಿದ್ದಾರೆ: ಚೆಲುವರಾಯಸ್ವಾಮಿ

ಮಂಡ್ಯ: ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಸಿ ನಾರಾಯಣ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಶೀಘ್ರದಲ್ಲಿಯೇ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚೆಲುವರಾಯಸ್ವಾಮಿ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾರಾಯಣ ಗೌಡರು ಹಾಗೂ ನಾವು ಸ್ನೇಹಿತರಾಗಿದ್ದು, ನಿರಂತರವಾಗಿ ಅವರು ನಮ್ಮ ಸಂಪರ್ಕದಲ್ಲಿದ್ದರು. ಈ ಅವರು ಕಾಂಗ್ರೆಸ್‌ ಸೇರುತ್ತಿದ್ದಾರೆ. ಕೆ.ಆರ್‌ ಪೇಟೆಯ ಹಲವು ಮುಖಂಡರು, ಕಾರ್ಯಕರ್ತರನ್ನು ಒಳಗೊಂಡಂತೆ ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದರು.

ನಾರಾಯಣ ಗೌಡ ಅವರ ಸೇರ್ಪಡೆ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

6 hours ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

6 hours ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

7 hours ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

7 hours ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

11 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

12 hours ago