ಮಂಡ್ಯ

ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿಟ್ಟು ಡೆಂಗ್ಯೂ ಹರಡುವಿಕೆ ತಡೆಗಟ್ಟಿ: ಡಾ.ಕುಮಾರ

ಮಂಡ್ಯ: ಡೆಂಗ್ಯೂ ಜ್ವರ ಸೊಳ್ಳೆಗಳ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಮುಂಗಾರು ಮಳೆ ಪ್ರಾರಂಭವಾಗಿದ್ದು, ಹಳ್ಳ ಕೊಳ್ಳಗಳಲ್ಲಿ ನೀರು ನಿಲ್ಲುತ್ತದೆ. ಹೆಚ್ಚಾಗಿ ಸೊಳ್ಳೆಗಳು ನಿಂತ ನೀರಿನಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಅವರು ಇಂದು ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಡೆಂಗ್ಯೂ ಜಾಗೃತಿ ಜಾಥಾ ಮತ್ತು ಮಾನವ ಸರಪಳಿ ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮೇ 16 ರಂದು ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಯನ್ನು ಆಚರಣೆ ಮಾಡಲಾಗುತ್ತದೆ. ಡೆಂಗ್ಯೂ ನಿಯಂತ್ರಣದ ಜಾಗೃತಿ ಜಾಥಾ ಕಾರ್ಯಕ್ರಮ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತಹ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಸಾರ್ವಜನಿಕರು ಡೆಂಗ್ಯೂ ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಮುನ್ನಚ್ಚರಿಕಾ ಕ್ರಮಗಳನ್ನು ಅನುಸರಿಸಿ ರೋಗ ಹರಡದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ರೋಗ ಬರುವುದಕ್ಕೂ ಮುಂಚಿತವಾಗಿ ನಾವುಗಳು ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚ ವಾಗಿಟ್ಟುಕೊಂಡರೆ ರೋಗ ಹರಡುವುದಿಲ್ಲ, ಹೀಗಾಗಿ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಚವಾಗಿಟ್ಟುಕೊಳ್ಳಿ ಎಂದರು.

ಜಿಲ್ಲಾ ಆರೋಗ್ಯಧಿಕಾರಿ ಡಾ ಕೆ ಮೋಹನ್ ಮಾತನಾಡಿ, ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ಈ ಬಾರಿ ಸಮುದಾಯದೊಂದಿಗೆ ಸೇರಿ ಡೆಂಗ್ಯೂ ನಿಯಂತ್ರಿಸೋಣ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಡೆಂಗ್ಯೂ ಜ್ವರವು ಸೊಳ್ಳೆಯಿಂದ ಹರಡುವಂತಹದ್ದು ಒಬ್ಬರಿಂದ ಮತ್ತೊಬ್ಬರಿಗೆ ಬರುವಂತಹ ಖಾಯಿಲೆ ಇದು ಆದ್ದರಿಂದ ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಸುತ್ತ-ಮುತ್ತ ಸ್ವಚ್ಛತಾ ಕಾಪಾಡಿಕೊಳ್ಳಬೇಕು ಎಂದರು.

ತೀವ್ರ ಜ್ವರ, ಕಣ್ಣು ಹಿಂಭಾಗ ನೋವು, ತೀರ ಮೈ-ಕೈ ನೋವು ಡೆಂಗ್ಯೂ ರೋಗದ ಲಕ್ಷಣಗಳು. ಈ ರೋಗ ಬರದಂತೆ ತಡೆದುಕೊಳ್ಳುವುದೇ ಮೂಲ ಉದ್ದೇಶವಾಗಿರುತ್ತದೆ, ಸೊಳ್ಳೆಗಳು ಉತ್ಪತ್ತಿ ಆಗದಂತೆ ನೋಡಿಕೊಳ್ಳುವುದು, ಮನೆ ಆವರಣದಲ್ಲಿ ನೀರು ನಿಲ್ಲದಂತೆ ಸ್ವಚ್ಛತಾ ಕಾಪಾಡಿಕೊಳ್ಳಬೇಕು ಹಾಗೂ ಈ ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದರು.

ನಗರದ ಸಂಜಯ್ ವೃತ್ತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಡೆಂಗ್ಯೂ ನಿಯಂತ್ರಣದ ಘೋಷವಾಕ್ಯ ಕೂಗುತ್ತಾ ಸಂಜಯ್ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಡೆಂಗ್ಯೂ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಮಲೇರಿಯಾ ನಿಯಂತ್ರಣಾಧಿಕಾರಿ ಡಾ ಕಾಂತರಾಜ, ಕುಷ್ಠರೋಗ ನಿರ್ಮೂಲನ ಅಧಿಕಾರಿ ಡಾ ಕೆ ಸೋಮಶೇಖರ್, ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಎಮ್.ಎನ್ ಆಶಾಲತಾ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

2 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

3 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

4 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

4 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

4 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

4 hours ago