ಮಂಡ್ಯ

ಹಿಂಬದಿ ಚಲಿಸಿದ ಕೇರಳ ಮೂಲದ ಬಸ್:‌ ಮಹಿಳೆ ಸಾವು

ಮಂಡ್ಯ: ಕೆ.ಆರ್.ಸಾಗರ ಬೃಂದಾವನಕ್ಕೆ ಬಂದಿದ್ದ ಕೇರಳ ಮೂಲದ ಬಸ್ಸೊಂದು ಹಿಂಬದಿ ಚಲಿಸಿದ ಪರಿಣಾಮ ಕೇರಳ ಮೂಲದ ಮಹಿಳೆ ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಬೃಂದಾವನ ಬಸ್ ಪಾರ್ಕಿಂಗ್‌ನಲ್ಲಿ ನಡೆದಿದೆ.

ಕೇರಳದ ಕೊಲ್ಲಂ ಗ್ರಾಮದ ಮಹಿಳೆಯರಿಬ್ಬರು ಬೃಂದಾವನ ವೀಕ್ಷಣೆ ಮಾಡಿಬಂದು ಊಟ ಮಾಡುತ್ತಿದ್ದರು. ಈ ವೇಳೆ ಅಲ್ಲೇ ನಿಂತಿದ್ದ ಕೇರಳ ಬಸ್ಸೊಂದು ಏಕಾಏಕಿ ಹಿಂಬದಿ ಚಲಿಸಿದೆ.

ಇದನ್ನು ಓದಿ: ಟಿಪ್ಪರ್‌-ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

ಈ ವೇಳೆ ಕಟ್ಟೆಯೊಂದರಲ್ಲಿ ಕುಳಿತು ಊಟ ಮಾಡುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಸ್‌ ಗುದ್ದಿದೆ. ಪರಿಣಾಮ ತೀವ್ರ ಗಾಯಗೊಂಡಿದ್ದ ಇಬ್ಬರು ಮಹಿಳೆಯರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೌಸಲ್ಯ ಎಂಬ ಮಹಿಳೆ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ನಾರಾಯಣಿ ಎಂಬುವವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಕೆ.ಆರ್.ಸಾಗರ ಪೊಲೀಸ್ ಠಾಣೆ ಪಿ.ಎಸ್.ಐ ರಮೇಶ್ ಕರಕಿಕಟ್ಟೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರವಾಸಿಗರಿಂದ ಮಾಹಿತಿ ಪಡೆದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

5 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

5 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

5 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

5 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

5 hours ago