ಮಂಡ್ಯ

ನಾಗಮಂಗಲ ಗಲಭೆ: ಕೇರಳ ಮೂಲದ ನಿಷೇಧಿತ ಪಿಎಫ್‌ಐ ಸದಸ್ಯರು ಭಾಗಿ ಶಂಕೆ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಅನುಮಾನ ವ್ಯಕ್ತವಾಗಿದ್ದು, ಈ ಗಲಭೆಯಲ್ಲಿ ಕೇರಳ ಮೂಲದ ಪಿಎಫ್‌ಐ ಸಂಘಟನೆ ಸದಸ್ಯರು ಭಾಗಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.

ನಾಗಮಂಗಲ ತಾಲ್ಲೂಕಿನಲ್ಲಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ನಡೆದ ಕೋಮು ಗಲಭೆ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯನ್ನು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಪೂರ್ವನಿಯೋಜಿತ ಕೃತ್ಯ ಎಂದು ಆರೋಪಿಸುತ್ತಿದ್ದಾರೆ. ಪ್ರಕರಣ ಸಂಬಂಧ ಇದುವರೆಗೆ 74 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಮಧ್ಯೆ ಗಲಾಟೆ ಹಿಂದೆ ಕೇರಳ ಮೂಲದವರ ಕೈವಾಡವಿದೆ ಎಂಬ ಅನುಮಾನ ಮೂಡಿದ್ದು, ಎಫ್‌ಐಆರ್‌ ದಾಖಲಿಸಿರುವ ಪೈಕಿಯಲ್ಲಿ ಇಬ್ಬರೂ ಕೇರಳ ಮೂಲದ ಹೆಸರು ಉಲ್ಲೇಖವಾಗಿದೆ. ಅದರಲ್ಲಿ ಎ44 ಯೂಸುಫ್‌ ಮತ್ತು ಎ61 ನಾಸೀರ್‌ ಎಂಬುವವರು ಕೇರಳ ಮೂಲದ ಮಲಪ್ಪುರಂ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಇದೆಲ್ಲದರ ನಡುವೆ ಈ ಇಬ್ಬರು ಆರೋಪಿಗಳು ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯರು ಎಂಬ ಶಂಕೆ ವ್ಯಕ್ತವಾಗಿದೆ.

ಕೆಲವು ದಿನಗಳಿಂದ ನಾಗಮಂಗಲದಲ್ಲಿ ವಾಸವಿದ್ದ ನಾಸೀರ್‌ ಹಾಗೂ ಯೂಸುಫ್‌, ಮೊದಲೇ ಸಂಚು ರೂಪಿಸಿ ಗಲಾಟೆಗೆ ಯೋಜನೆ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಗಣೇಶ ವಿಸರ್ಜನೆಯನ್ನೇ ಅಸ್ತ್ರ ಮಾಡಿಕೊಂಡ ಅವರು, ಆ ದಿನ ಗಲಭೆ ಎಬ್ಬಿಸಿದ್ದಾರೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು, ಘಟನೆ ನಡೆಯುವ ಸಂದರ್ಭದಲ್ಲಿ ಕೇರಳದವರು ಬಂದು ಹೋಗಿಲ್ಲ. ಕೇರಳದವರೇ ನಾಗಮಂಗಲ ಬೇಕರಿಯಲ್ಲಿ ಕೆಲಸ ನಿವಹಿಸುತ್ತಿದ್ದಾರೆ. ಹಾಗಾಗಿ ಅವರನ್ನು ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೆಸ್ಟ್‌ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂಪೂರ್ಣ ತನಿಖೆಯಾಗದೇ ಪಿಎಫ್‌ಐ ಸಂಘಟನೆಯವರು ಭಾಗಿಯಾಗಿದ್ದಾರೆ ಎಂದು ಹೇಳಲು ಆಗಲ್ಲ. ಈ ಬಗ್ಗೆ ಯಾವುದೇ ಊಹಾಪೋಹಗಳು ಬೇಡ ಎಂದು ಹೇಳಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

10 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

11 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

11 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

12 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

12 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

15 hours ago