ಮಂಡ್ಯ

ಯುವಕನಿಂದ ಅಪ್ರಾಪ್ತೆ ಅಪಹರಣ: ದೂರು ನೀಡಿದರೂ ಪೊಲೀಸರ ನಿರ್ಲಕ್ಷ್ಯ

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು.

ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ಐದು ದಿನಗಳ ಹಿಂದೇ ರವಿ ಎಂಬುವವರ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿ ಎಂಬಾತ ಅಪ್ರಾಪ್ತ ಯುವತಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ.ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿ.ಬಾಚಹಳ್ಳಿ ಗ್ರಾಮಸ್ಥರು ಶವದೊಂದಿಗೆ ಪಟ್ಟಣದ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ್ದು, ಆರೋಪಿಗಳನ್ನು ಬಂಧಿಸುವವರೆಗೂ ಶವಸಂಸ್ಕಾರ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು. ಎಸ್‌.ಪಿ.ಯತೀಶ್‌ ಕುಮಾರ್‌ ಅವರ ಮನವೊಲಿಕೆಯೂ ವಿಫಲವಾದಾಗ ಪೊಲೀಸರು ಗುಂಪನ್ನು ಚದುರಿಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು.

ಪೊಲೀಸರ ವಿರುದ್ಧ ಆಕ್ರೋಶ :ಇದಕ್ಕೂ ಮೊದಲು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಹಾಗೂ ಮೃತರ ಸಂಬಂಧಿಕರು ‘ಐದು ದಿನಗಳ ಹಿಂದೆಯೇ ರವಿ ಅವರು ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದರೂ ಕ್ರಮಕೈಗೊಳ್ಳದೇ ಪೊಲೀಸರು ಬೇಜವಾಬ್ದಾರಿ ಪ್ರದರ್ಶಿಸಿದ್ದಾರೆ. ರವಿ  ಸಾವಿಗೆ ಪೊಲೀಸರ ವೈಫಲ್ಯ ಕಾರಣ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ರವಿ ಅವರ ಅಪ್ರಾಪ್ತ ಪುತ್ರಿಯನ್ನು ಅಭಿ(26) ಎಂಬ ಯುವಕ ಅಪಹರಿಸಿದ್ದಾನೆ. ಸುನೀಲ್‌ ಮತ್ತು ಪಲ್ಲವಿ ಇದಕ್ಕೆ ಸಹಕರಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾದರೂ ಕ್ರಮ ಕೈಗೊಂಡಿಲ್ಲ

ತಕ್ಷಣವೇ ಪೊಲೀಸರು ಕ್ರಮ ಜರುಗಿಸಿ ಅಪ್ರಾಪ್ತೆಯನ್ನು ಅಭಿ ಅಪಹರಿಸಲು ಸಹಕರಿಸಿದವರನ್ನು ವಿಚಾರಣೆಗೊಳಪಡಿಸಿದ್ದರೆ ದುರಂತ ನಡೆಯುತ್ತಿರಲಿಲ್ಲ.ರಾಜಕೀಯ ಒತ್ತಡಕ್ಕೆ ಮಣಿದು ಪೊಲೀಸರು ಅಪಹರಣಕಾರರ ಪರ ನಿಂತಿದ್ದಾರೆ. ಯುವಕನ ಕಡೆಯವರು ರವಿ ಅವರಿಗೆ ಬಹಿರಂಗವಾಗಿಯೇ ಬೆದರಿಕೆ ಹಾಕಿದ್ದು, ರವಿ ಸಾವಿಗೆ ಪೊಲೀಸರ ಕರ್ತವ್ಯ ಲೋಪವೇ ಕಾರಣ ಎಂದು ಆರೋಪಿಸಿದರು. ತಕ್ಷಣವೇ ಬಾಲಕಿಯ ಅಪಹರಣಕಾರರನ್ನು ಬಂಧಿಸಬೇಕು. ಬೆದರಿಕೆ ಹಾಕುವ ಮೂಲಕ ರವಿ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago