Mysore
31
few clouds

Social Media

ಶನಿವಾರ, 15 ಮಾರ್ಚ್ 2025
Light
Dark

ಕೆ.ಎಂ ದೊಡ್ಡಿ | ಬಸ್‌ ಸೇವೆಗೆ ಚಾಲನೆ; ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ

ಕೆ.ಎಂ ದೊಡ್ಡ: ಇಲ್ಲಿನ ಸಮೀಪದ ಮಣಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುದಿನದ ಬೇಡಿಕೆಯಾದ ಸಾರಿಗೆ ಬಸ್ ಸೇವೆಯನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಮದ್ದೂರು ಶಾಸಕ ಕೆ.ಎಂ ಉದಯ್ ನೆರವೇರಿಸಿದ್ದಾರೆ.

ಹಸಿರು ನಿಶಾನೆ ತೋರುವುದರ ಮೂಲಕ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,  ಮಣಿಗೆರೆ  ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಕೋರಿಕೆಯ ಮೇರೆಗೆ ಬಸ್‌ ಸೇವೆ ಆರಂಭಿಸಲಾಗಿದೆ. ಜೊತೆಗೆ ಕೆ.ಎಂ.ದೊಡ್ಡಿಯಿಂದ ಮಣಿಗೆರೆ ಕಾಲೇಜಿಗೆ ಸಾರಿಗೆ ಬಸ್ ಸೌಲಭ್ಯವನ್ನ ಮಾಡಲಾಗಿದೆ ಇದರಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಿದೆ ಎಂದು ಹೇಳಿದರು.

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಅಲ್ಲದೆ ವಿವಿಧ ಕೋರ್ಸ್ಗಳನ್ನು ಜಾರಿಗೆ ತರಲು ಈಗಾಗಲೇ ಸರ್ಕಾರ ಜೊತೆಗೆ ಚರ್ಚಿಸಲಾಗಿದೆ. ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ ಮೂರ್ತಿ, ಸಾರಿಗೆ ನಿರೀಕ್ಷಕ ಚುಂಚಯ್ಯ, ಟಿ.ಸಿ.ಚಂದ್ರು,ಮುಖಂಡರಾದ ಅಭಿಷೇಕ, ಪ್ರಕಾಶ್, ಶ್ರೀನಿವಾಸ, ಪೂಜಾರಿ ಮಹೇಶ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.

Tags: