ಕೆ.ಎಂ ದೊಡ್ಡ: ಇಲ್ಲಿನ ಸಮೀಪದ ಮಣಿಗೆರೆ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುದಿನದ ಬೇಡಿಕೆಯಾದ ಸಾರಿಗೆ ಬಸ್ ಸೇವೆಯನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯನ್ನು ಮದ್ದೂರು ಶಾಸಕ ಕೆ.ಎಂ ಉದಯ್ ನೆರವೇರಿಸಿದ್ದಾರೆ.
ಹಸಿರು ನಿಶಾನೆ ತೋರುವುದರ ಮೂಲಕ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಣಿಗೆರೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರ ಕೋರಿಕೆಯ ಮೇರೆಗೆ ಬಸ್ ಸೇವೆ ಆರಂಭಿಸಲಾಗಿದೆ. ಜೊತೆಗೆ ಕೆ.ಎಂ.ದೊಡ್ಡಿಯಿಂದ ಮಣಿಗೆರೆ ಕಾಲೇಜಿಗೆ ಸಾರಿಗೆ ಬಸ್ ಸೌಲಭ್ಯವನ್ನ ಮಾಡಲಾಗಿದೆ ಇದರಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಿದೆ ಎಂದು ಹೇಳಿದರು.
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಅಲ್ಲದೆ ವಿವಿಧ ಕೋರ್ಸ್ಗಳನ್ನು ಜಾರಿಗೆ ತರಲು ಈಗಾಗಲೇ ಸರ್ಕಾರ ಜೊತೆಗೆ ಚರ್ಚಿಸಲಾಗಿದೆ. ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ ಮೂರ್ತಿ, ಸಾರಿಗೆ ನಿರೀಕ್ಷಕ ಚುಂಚಯ್ಯ, ಟಿ.ಸಿ.ಚಂದ್ರು,ಮುಖಂಡರಾದ ಅಭಿಷೇಕ, ಪ್ರಕಾಶ್, ಶ್ರೀನಿವಾಸ, ಪೂಜಾರಿ ಮಹೇಶ್ ಸೇರಿದಂತೆ ಹಲವಾರು ಉಪಸ್ಥಿತರಿದ್ದರು.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…