ಮಂಡ್ಯ : 15 ಸಾವಿರ ಬೆಲೆ ಬಾಳುವ ಜರ್ಮನ್ ಶೆಫರ್ಡ್ ತಳಿಯ ಸಾಕು ನಾಯಿಯನ್ನು ಚಿರತೆಯು ತಿಂದು ಹಾಕಿರುವ ಘಟನೆ ಕೆ ಆರ್ ಪೇಟೆ ತಾಲ್ಲೂಕಿನ ಕಸಬಾ ಹೋಬಳಿಯ ಮೊಸಳೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ನಾಗರಾಜು ಎಂಬುವರ ಮನೆ ಪಕ್ಕದಲ್ಲಿರುವ ಪಶು ಸಾಕಾಣಿಕೆ ಶೆಡ್ಡಿನಲ್ಲಿ ಕಟ್ಟಿದ್ದ ಸಾಕು ನಾಯಿಯನ್ನು ಗುರುವಾರ ರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ ಚಿರತೆ ದಾಳಿ ನಡೆಸಿ ತಲೆ ಬಿಟ್ಟು ದೇಹದ ಎಲ್ಲ ಭಾಗವನ್ನು ತಿಂದು ಹಾಕಿದೆ.
ಅದೃಷ್ಟವಶಾತ್ ಶೆಡ್ಡಿನಲ್ಲಿ ಬೇರೆ ಯಾವುದೇ ಸಾಕು ಪ್ರಾಣಿಗಳನ್ನು ಕಟ್ಟದಿದ್ದ ಕಾರಣ ಅವುಗಳ ಪ್ರಾಣ ಉಳಿದಿದೆ.
ಗ್ರಾಮದ ಒಳಗೆ ನುಗ್ಗಿ ಚಿರತೆ ದಾಳಿ ಮಾಡಿರುವುದರಿಂದ ಗ್ರಾಮಸ್ಥರು ಭಯ ಭೀತರಾಗಿದ್ದು, ಕೂಡಲೇ ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಚಿರತೆಯನ್ನು ಸರೆಹಿಡಿಯುಂತೆ ಮೊಸಳೆಕೊಪ್ಪಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…