ಮಂಡ್ಕ ; ಕಳೆದ ಒಂದು ವರ್ಷದಿಂದ ಮೂರನೇ ಬಾರಿಗೆ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಈಜುಕೊಳದಂತಾಗಿದ್ದು ಕೂಡಲೇ ಸರ್ಕಾರಿ ಬಸ್ ನಿಲ್ದಾಣಕ್ಕೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಜೆಡಿಎಸ್ ಮುಖಂಡ ಹಾಗೂ ಮನ್ಮುಲ್ ನಿರ್ದೇಶಕ ಹೆಚ್.ಟಿ.ಮಂಜು ಆಗ್ರಹಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆಯಷ್ಟೇ ಬಸ್ ನಿಲ್ದಾಣದಲ್ಲಿ ನೀರು ನುಗ್ಗಿ ಪ್ರಯಾಣಿಕರಿಗೆ ತೊಂದರೆಯಾಗಿದ್ದರೂ ತಾಲ್ಲೂಕು ಹಾಗೂ ಜಿಲ್ಲಾಡಳಿತದ ಮತ್ತು ಪುರಸಭೆಯ ಯಾವುದೇ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳದ ಕಾರಣ ಬುಧವಾರ ಮುಂಜಾವಿನಲ್ಲಿ ಸುರಿದ ಮಳೆಗೆ ಬಸ್‍ನಿಲ್ದಾಣ ಈಜುಕೊಳದಂತಾಗಿದೆ.
ಎಂಟು ತಿಂಗಳ ಹಿಂದೆಯಷ್ಟೇ ಪ್ರಯಾಣಿಕರು ಬಸ್ ನಿಲ್ದಾಣದೊಳಗೆ ಸಿಲುಕಿದ್ದು ಅವರುಗಳನ್ನು ಅಗ್ನಿಶಾಮಕ ಸಿಬ್ಬಂದಿಗಳು ಹರಿಗೋಲಿನ ಸಹಾಯದಿಂದ ರಕ್ಷಣೆ ಮಾಡಿದ್ದರು. ಆಗಲೂ ಸಚಿವ ನಾರಾಯಣಗೌಡ ಸ್ಥಳ ಪರಿಶೀಲನೆ ಮಾಡಿ ಜಿಲ್ಲಾಧಿಕಾರಿಗಳಿಗೆ ರಾಜಕಾಲುವೆ ಒತ್ತುವರಿ ತೆರವು, ಹಾಗೂ ಮುಖ್ಯ ರಸ್ತೆಯ ಸೇತುವೆಯ ಕೆಳಗಿನ ಭಾಗವನ್ನು ಇಳಿಜಾರು ಮಾಡುವಂತೆ ಆದೇಶ ನೀಡಿದ್ದರೂ ಜಿಲ್ಲಾಧಿಕಾರಿಗಳು ಯಾವುದೇ ರೀತಿಯ ಕ್ರಮವಹಿಸದೇ ಇರುವುದು ಇಷ್ಟೆಲ್ಲಾ ಅನಾಹುತಗಳಿಗೆ ಕಾರಣವಾಗಿದೆ.
ಹೋಟೆಲ್ ಮಾಲೀಕರ ಗೋಳು ಹೇಳತೀರದು : ಬಸ್‍ನಿಲ್ದಾಣದಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವ ಮಾಲೀಕ ಗುರುಪ್ರಸಾದ್ ತಮ್ಮ ಸಂಕಷ್ಟವನ್ನು ಹೇಳತೀರದಾಗಿದೆ. ಸಾಧಾರಣ ಮಳೆಯಾದರೂ ಹೋಟೆಲ್‍ನ ಒಳಭಾಗಕ್ಕೆ ನೀರುನುಗ್ಗಿ ಎಲ್ಲಾ ಅಡುಗೆ ಸಾಮಗ್ರಿಗಳೂ ನೀರುಪಾಲಾಗುತ್ತಿವೆ. ಸಕ್ಕರೆ, ಗೋಧಿಹಿಟ್ಟು, ಮೈದ, ರವೆ, ಕಾಫಿ, ಟೀಪುಡಿ, ಅಕ್ಕಿ ಸೇರಿದಂತೆ ಲಕ್ಷಾಂತರ ರೂಪಾಯಿಗಳ ನಷ್ಟವುಂಟಾಗುತ್ತಿದೆ. ಪ್ರತೀ ಬಾರಿ ನೀರು ತುಂಬಿದಾಗಲೂ ಲಕ್ಷಾಂತರ ಮೌಲ್ಯದಷ್ಟು ನಷ್ಟವುಂಟಾಗುತ್ತಿದ್ದು ಇದಕ್ಕೆ ಹೊಣೆ ಯಾರು ಎಂದು ಪ್ರಶ್ನಿಸತೊಡಗಿದ್ದಾರೆ.¸
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್…
ಬೆಂಗಳೂರು: ಪೈರಸಿ ವಿರುದ್ಧ ನವರಸ ನಾಯಕ ಜಗ್ಗೇಶ್ ಸಮರ ಸಾರಿದ್ದು, ಕೋಣ ಸಿನಿಯಾ ಪೈರಸಿ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೊಸ ವರ್ಷ ಆಚರಣೆಗೆ ಸರ್ವ ರೀತಿಯಲ್ಲೂ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಪ್ರಮುಖವಾಗಿ…
ಕೇರಳ(ತಿರುವನಂತಪುರ): ವೈವಿದ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣಗುರುಗಳ ಗುರಿಯಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ…
ಮೈಸೂರು: ದೇಶದೊಳಗೆ ಅಕ್ರಮವಾಗಿ ನುಸುಳುವವರ ಸಂಖ್ಯೆ ಹೆಚ್ಚಾಗಿದ್ದು, ಕರ್ನಾಟಕದಲ್ಲಿಯೂ ಬಾಂಗ್ಲಾದೇಶದ ಪ್ರಜೆಗಳು ಉದ್ಧಟತನ ತೋರುತ್ತಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ಹಿನ್ನೆಲೆಯಲ್ಲಿ…