ಮಂಡ್ಯ

ಕಡಲ ಕಿನಾರೆಯಂತಾದ ಕಾವೇರಿ ನದಿ ತಟ: ಕೆಆರ್‌ಎಸ್‌ ಪ್ರವಾಸಿಗರು ಫುಲ್‌ ಫಿದಾ.!

ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ ನದಿಯಲ್ಲಿ ಸದ್ಯ ಈ ಸಮುದ್ರವನ್ನು ಸೃಷ್ಟಿಸಿದಂತಿದೆ.

ಹೌದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ ಭರ್ಜರಿ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಮಟ್ಟ ಭಾರೀ ಏರಿಕೆ ಕಂಡಿದ್ದು, ಅನ್ನದಾತರ ಮೊಗದಲ್ಲಿ ಸಂತಸ ಮನೆಮಾಡಿದೆ.

ನೀರಿನ ಮಟ್ಟ ಭಾರೀ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಜಲಾಶಯದ ಹಿನ್ನೀರಿನಲ್ಲಿ ಸಮುದ್ರದಂತೆ ಅಲೆಗಳು ಏಳುತ್ತಿದ್ದು, ಜನರಿಗೆ ಕಡಲ ಕಿನಾರೆಯ ಅನುಭವ ನೀಡುತ್ತಿದೆ. ಹೀಗಾಗಿ ಸಾಯಂಕಾಲವಾಗುತ್ತಲೇ ಪ್ರವಾಸಿಗರು ಹಿನ್ನೀರಿನ ಈ ಪ್ರದೇಶಕ್ಕೆ ಬಂದು ನೀರಾಟ, ಮೋಜುಮಸ್ತಿ ಜೊತೆಗೆ ಸೆಲ್ಪಿ ಕ್ಲಿಕ್ಕಿಸಿ ಸಂಭ್ರಮಿಸುತ್ತಾರೆ.

ಮಳೆ ಆರಂಭಕ್ಕೂ ಮುನ್ನ ನೀರಿಲ್ಲದೇ ಭಣಗುಡುತ್ತಿದ್ದ ಜಲಾಶಯಗಳು ಈಗ ಭರ್ಜರಿ ಮಳೆಯಿಂದ ತುಂಬಿ ತುಳುಕಾಡುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿವೆ. ಮೈಸೂರಿನಿಂದ ಕೆಆರ್‌ಎಸ್‌ ಮಾರ್ಗವಾಗಿ ತೆರಳಿದರೆ ವೇಣುಗೋಪಾಲಸ್ವಾಮಿ ದೇವಸ್ಥಾನದ ಹಿಂದೆ ಈ ಹಿನ್ನೀರಿನ ಪ್ರದೇಶವನ್ನು ಕಾಣಬಹುದಾಗಿದೆ.

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು ವೀಕೆಂಡ್‌ನಲ್ಲಿ ಡ್ಯಾಂ ನೋಡಲು ಹೋಗುತ್ತಿದ್ದಾರೆ. ಇದರ ಜೊತೆಗೆ ಕೆಆರ್‌ಎಸ್‌ ಡ್ಯಾಂನ ಹಿನ್ನೀರಿನಲ್ಲಿ ಆಟವಾಡುತ್ತಾ ನೆನೆಪಿಗಾಗಿ ಫೋಟೋ ಕ್ಲಿಕ್ಕಿಸಿ ಬರುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಸದ್ಯ ಮೈಸೂರಿನ ಜನರ ಪಾಲಿಗೆ ಕೆಆರ್‌ಎಸ್‌ ಬ್ಯಾಕ್‌ ವಾಟರ್‌ ಕಡಲ ಕಿನಾರೆಯಷ್ಟು ಖುಷಿ ಕೊಡುತ್ತಿದ್ದು, ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

53 seconds ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

2 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

3 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

4 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago