Mysore
19
overcast clouds
Light
Dark

ಕೆಆರ್‌ಎಸ್:‌ ಬಾಗಿನ ಕಾರ್ಯಕ್ರಮದಲ್ಲಿ ಬಾಡೂಟ ಆಯೋಜನೆ

ಮಂಡ್ಯ: ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದೆ. ಈ ಹಿನ್ನಲೆ ಸಿಎಂ, ಡಿಸಿಎಂ ಅವರು ಶ್ರೀರಂಗಪಟ್ಟಣ ತಾಲೂಕಿನ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಕಾವೇರಿ ನಿಗಮ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.

ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ.

ಅತ್ತ ಸಿಎಂ ಹಾಗೂ ಸಚಿವರು ಬಾಗಿನ ಅರ್ಪಿಸಿ ಹೊರಟ ಬಳಿಕ ಇತ್ತ ಕಾವೇರಿ ನಿಗಮ ಅಧಿಕಾರಿಗಳು ಭರ್ಜರಿ ಬಾಡೂಟ ಸೇವಿಸಿದ್ದಾರೆ. ಕೆಆರ್‌ಎಸ್‌ ನ ಖಾಸಗಿ ಹೋಟೆಲ್‌ನಲ್ಲಿ ಬಾಡೂಡ ಆಯೋಜನೆ ಮಾಡಲಾಗಿತ್ತು.. ಈ ಮೂಲಕ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ.

ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜಿಸಿದ್ದ ಉದಾಹಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಕಾವೇರಿ ನಿಗಮ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದು, ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತಗುತ್ತಿವೆ.

ಅಧಿಕಾರಿಗಳ ಈ ಎಡವಟ್ಟಿಗೆ ವಿಪಕ್ಷಗಳು ಏನು ಹೇಳುತ್ತವೇ? ಜತೆಗೆ ಸಿಎಂ ಸಿದ್ದರಾಮಯ್ಯ ಏನು ಶಿಸ್ತು ಕ್ರಮಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.

Tags: