ಮಂಡ್ಯ: ಬರಿದಾಗಿದ್ದ ಕಾವೇರಿ ಜಲಾಶಯ ಇದೀಗ ಭರ್ತಿಯಾಗಿದೆ. ಈ ಹಿನ್ನಲೆ ಸಿಎಂ, ಡಿಸಿಎಂ ಅವರು ಶ್ರೀರಂಗಪಟ್ಟಣ ತಾಲೂಕಿನ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಕಾವೇರಿ ನಿಗಮ ಅಧಿಕಾರಿಗಳು ಎಡವಟ್ಟು ಮಾಡಿಕೊಂಡಿದ್ದಾರೆ.
ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ.
ಅತ್ತ ಸಿಎಂ ಹಾಗೂ ಸಚಿವರು ಬಾಗಿನ ಅರ್ಪಿಸಿ ಹೊರಟ ಬಳಿಕ ಇತ್ತ ಕಾವೇರಿ ನಿಗಮ ಅಧಿಕಾರಿಗಳು ಭರ್ಜರಿ ಬಾಡೂಟ ಸೇವಿಸಿದ್ದಾರೆ. ಕೆಆರ್‌ಎಸ್ ನ ಖಾಸಗಿ ಹೋಟೆಲ್‌ನಲ್ಲಿ ಬಾಡೂಡ ಆಯೋಜನೆ ಮಾಡಲಾಗಿತ್ತು.. ಈ ಮೂಲಕ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ.
ಈ ಹಿಂದೆ ಎಂದೂ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜಿಸಿದ್ದ ಉದಾಹಣೆಗಳೇ ಇಲ್ಲ. ಇದೇ ಮೊದಲ ಬಾರಿಗೆ ಬಾಗಿನ ಸಲ್ಲಿಸಿದ ದಿನ ಬಾಡೂಟ ಆಯೋಜನೆ ಮಾಡಲಾಗಿದೆ. ಈ ಮೂಲಕ ಕಾವೇರಿ ನಿಗಮ ಅಧಿಕಾರಿಗಳು ಸಂಪ್ರದಾಯಕ್ಕೆ ಎಳ್ಳು ನೀರು ಬಿಟ್ಟಿದ್ದು, ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತಗುತ್ತಿವೆ.
ಅಧಿಕಾರಿಗಳ ಈ ಎಡವಟ್ಟಿಗೆ ವಿಪಕ್ಷಗಳು ಏನು ಹೇಳುತ್ತವೇ? ಜತೆಗೆ ಸಿಎಂ ಸಿದ್ದರಾಮಯ್ಯ ಏನು ಶಿಸ್ತು ಕ್ರಮಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…