Mysore
22
clear sky

Social Media

ಬುಧವಾರ, 01 ಏಪ್ರಿಲ 2026
Light
Dark

ವರ್ಷದಲ್ಲಿ ಮೂರನೇ ಬಾರಿಗೆ ಭರ್ತಿಯಾದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಮೂರನೇ ಬಾರಿಗೆ ಭರ್ತಿಯಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಹಿಂಗಾರು ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯಕ್ಕೆ 8547 ಕ್ಯೂಸೆಕ್ಸ್‌ ಒಳಹರಿವು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.

ಕಳೆದ ಜುಲೈ.27ರಂದು ಜಲಾಶಯ ಸಂಪೂರ್ಣ ಭರ್ತಿಯಾಗಿತ್ತು. ಪರಿಣಾಮ ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಕೂಡ ಹೊರಬಿಡಲಾಗಿತ್ತು.

ಈಗ ಹಿಂಗಾರು ಮಳೆ ಚುರುಕು ಪಡೆದುಕೊಂಡ ಹಿನ್ನೆಲೆಯಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ 8287 ಕ್ಯೂಸೆಕ್ಸ್‌ ನೀರನ್ನು ಬಿಡುಗಡೆ ಮಾಡಲಾಗಿದೆ.

 

 

Tags:
error: Content is protected !!