ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಮೂರನೇ ಬಾರಿಗೆ ಭರ್ತಿಯಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಹಿಂಗಾರು ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯಕ್ಕೆ 8547 ಕ್ಯೂಸೆಕ್ಸ್ ಒಳಹರಿವು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಕಳೆದ ಜುಲೈ.27ರಂದು ಜಲಾಶಯ ಸಂಪೂರ್ಣ ಭರ್ತಿಯಾಗಿತ್ತು. ಪರಿಣಾಮ ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಕೂಡ ಹೊರಬಿಡಲಾಗಿತ್ತು.
ಈಗ ಹಿಂಗಾರು ಮಳೆ ಚುರುಕು ಪಡೆದುಕೊಂಡ ಹಿನ್ನೆಲೆಯಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ 8287 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಮಾಗನೂರು ಶಿವಕುಮಾರ್ ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ…
ಪ್ರವಾಸಿಗರ ಅಸಮಾಧಾನ; ವಿಡಿಯೋ ವೈರಲ್ ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ಪ್ರವಾಸಿಗರಿಂದ ದುಪ್ಪಟ್ಟು…
ಕೆ.ಬಿ.ರಮೇಶನಾಯಕ ಮೊದಲ ಹಂತದಲ್ಲಿ ಮೈಸೂರಿನ ಪ್ರಮುಖ ಮೂರು ರಸ್ತೆಗಳ ಗುರುತು ಮೈಸೂರು: ದೇಶದ ಪ್ರಮುಖ ಸ್ಮಾರ್ಟ್ ಸಿಟಿಗಳಲ್ಲಿ ನಿರ್ಮಾಣಗೊಂಡಿರುವ ವಿಶ್ವದರ್ಜೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…