ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯ ಮೂರನೇ ಬಾರಿಗೆ ಭರ್ತಿಯಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಹಿಂಗಾರು ಮಳೆಯಾಗುತ್ತಿರುವ ಪರಿಣಾಮ ಕೆಆರ್ಎಸ್ ಜಲಾಶಯಕ್ಕೆ 8547 ಕ್ಯೂಸೆಕ್ಸ್ ಒಳಹರಿವು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಕಳೆದ ಜುಲೈ.27ರಂದು ಜಲಾಶಯ ಸಂಪೂರ್ಣ ಭರ್ತಿಯಾಗಿತ್ತು. ಪರಿಣಾಮ ಡ್ಯಾಂನಿಂದ ಅಪಾರ ಪ್ರಮಾಣದ ನೀರನ್ನು ಕೂಡ ಹೊರಬಿಡಲಾಗಿತ್ತು.
ಈಗ ಹಿಂಗಾರು ಮಳೆ ಚುರುಕು ಪಡೆದುಕೊಂಡ ಹಿನ್ನೆಲೆಯಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ 8287 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಲಾಗಿದೆ.
ಸೋಮವಾರಪೇಟೆ: ಸೋಮವಾರಪೇಟೆ–ಮೈಸೂರು–ಬೆಂಗಳೂರು ಮಾರ್ಗವಾಗಿ ತೆರಳುತ್ತಿದ್ದ ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಮಯಪ್ರಜ್ಞೆ ಮೆರೆದ ಕೆಎಸ್ಆರ್ಟಿಸಿ…
ಮೈಸೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನನಗೆ ಸೂಕ್ತವಲ್ಲ. ಆ ಹುದ್ದೆ ಬೇಡ ಎಂದು ಹಿಂದೆಯೇ ಹೇಳಿದ್ದೆ ಎಂದು ಮೈಸೂರಿನಲ್ಲಿ…
ಕೊಡಗು: ಜಿಲ್ಲೆಯ ಕುಶಾಲನಗರ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದೆ.…
ಯಳಂದೂರು: ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗುತ್ತಿದ್ದ ಸವಾರರು ಗುರುವಾರ ಸುಮಾರು ಒಂದು ಗಂಟೆ ರಸ್ತೆಯಲ್ಲೇ ಕಾಯಬೇಕಾಯಿತು. ಕಾರಣ, ಗೇಮ್ ರೋಡ್ನ ಮಧ್ಯದಲ್ಲೇ…
ಬೆಂಗಳೂರು: ರಾಜ್ಯದ ನಿಗಮ–ಮಂಡಳಿ ಅಧ್ಯಕ್ಷರು ಮತ್ತು ಸರ್ಕಾರದ ಪ್ರಮುಖ ಹುದ್ದೆಗಳ ಪಟ್ಟಿ ಪ್ರಕಟವಾಗಿದೆ. ಒಟ್ಟು 18 ಮಂದಿಗೆ ಜವಾಬ್ದಾರಿ ಹಂಚಿಕೆ…
ಮೈಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹೋಗಿಬರುವ - ಬಸ್ಸುಗಳಲ್ಲಿ ಪ್ರಯಾಣಿಕರಿಗೆ ನಮ್ಮ ಹೆಮ್ಮೆಯ ನಂದಿನಿಯ ಬಾದಾಮಿ ಹಾಲು, ಮಜ್ಜಿಗೆ, ಲಸ್ಸಿ…