ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಸ್ಥಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದ್ದು, ಜೀವನದಿ ಕಾವೇರಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಕೆಆರ್‌ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ಪರಿಣಾಮ ಕಾವೇರಿ ನದಿ ಪಾತ್ರದಲ್ಲಿ ಭಾರೀ ಪ್ರವಾಹದ ಆತಂಕ ಮನೆಮಾಡಿದ್ದು, ಹಲವು ಪ್ರಸಿದ್ಧ ಕ್ಷೇತ್ರಗಳಿಗೂ ಪ್ರವಾಹ ಆತಂಕ ಎದುರಾಗಿದೆ.
ಇನ್ನು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನಿಮಿಷಾಂಭ ದೇವಾಲಯಕ್ಕೂ ಕಾವೇರಿ ನದಿ ಪ್ರವಾಹ ಎದುರಾಗಿದ್ದು, ದೇವಾಲಯದ ಸ್ನಾನದ ಮೆಟ್ಟಿಲುಗಳು ಸಂಪೂರ್ಣ ಮುಳುಗಡೆಯಾಗಿವೆ.
ದೇವಾಲಯದ ಮುಂಭಾಗದ ಮೆಟ್ಟಿಲುಗಳ ಬಳಿಯೂ ಕೂಡ ನದಿ ನೀರು ಆವರಿಸಿದ್ದು, ಭಕ್ತರಿಗೆ ನದಿಯ ಬಳಿ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇನ್ನೂ ದೇವರ ದರ್ಶನಕ್ಕೆ ಬರುವ ಭಕ್ತರೂ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಾಗಿ ತಾಲ್ಲೂಕು ಆಡಳಿತ ಮನವಿ ಮಾಡಿದೆ.
ಮಳೆ ಹೆಚ್ಚಾದರೆ ಕೆಆರ್‌ಎಸ್ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆಯಾಗಿ ಇರಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…
ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…