ಮಂಡ್ಯ: ಭಾರೀ ಮಳೆಯಿಂದ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರು ಅನ್ನದಾತರ ಸಂಕಷ್ಟ ಇನ್ನೂ ಕಡಿಮೆಯಾಗಿಲ್ಲ.
ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿ ರೈತರು ಬಹಳ ಸಂತೋಷದಲ್ಲಿದ್ದರು.
ಹೇಗೋ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಈ ಬಾರಿಯಾದರೂ ನಾವು ಹೆಚ್ಚು ಹೆಚ್ಚು ಬೆಳೆಯನ್ನು ಬೆಳೆಯಬಹುದು ಎಂಬ ಅಂದಾಜಿನಲ್ಲಿ ರೈತರು ಖುಷಿ ಖುಷಿಯಾಗಿದ್ದರು.
ಆದರೆ ರೈತರ ಈ ಖುಷಿಗೆ ಸರ್ಕಾರ ಬ್ರೇಕ್ ಹಾಕಿದ್ದು, ಈ ಬಾರಿ ಕೆಆರ್‌ಎಸ್ ಡ್ಯಾಂನಿಂದ ಕಟ್ಟು ಪದ್ಧತಿಯಲ್ಲಿ ನಾಲೆಗಳಿಗೆ ನೀರು ಬಿಡುವ ತೀರ್ಮಾನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಟ್ಟು ಪದ್ಧತಿಯ ನೀರನ್ನು ನಂಬಿ ನಾವು ಹೇಗೆ ಬೆಳೆ ಬೆಳೆಯೋದು ಎಂದು ರೈತರು ತೀವ್ರ ಕಂಗಾಲಾಗಿದ್ದಾರೆ.
ಸರ್ಕಾರದ ಈ ನಿರ್ಧಾರದಿಂದ ಆಕ್ರೋಶಗೊಂಡಿರುವ ರೈತರು, ನಾಲೆಗಳಿಗೆ ಪೂರ್ಣ ಪ್ರಮಾಣದಲ್ಲಿ ನೀರು ಬಿಡಬೇಕು. ಆಗ ಮಾತ್ರ ನಾವು ಹೆಚ್ಚು ಹೆಚ್ಚು ಬೆಳೆಯನ್ನು ಬೆಳೆಯಲು ಅನುಕೂಲವಾಗಲಿದೆ. ಒಂದು ವೇಳೆ ಪೂರ್ತಿ ಪ್ರಮಾಣದ ನೀರನ್ನು ಬಿಡದೇ ಹೋದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಪೂರ್ಣ ಪ್ರಮಾಣದ ನೀರನ್ನು ಬಿಡುಗಡೆ ಮಾಡಲು ಎಲ್ಲಾ ಶಾಸಕರು ಸರ್ಕಾರದ ಬಳಿ ಕೇಳಿಕೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…