ಶ್ರೀರಂಗಪಟ್ಟಣ : ಕೆ.ಆರ್.ಎಸ್. ಅಣೆಕಟ್ಟೆ ಭರ್ತಿಯ ಹಂತಕ್ಕೆ ಬಂದ ಹಿನ್ನಲೆ ಕಾವೇರಿ ನೀರಾವರಿ ನಿಗಮ ಹೈ ಅಲರ್ಟ್ ಆಗಿದ್ದು, ಕೆ.ಆರ್.ಎಸ್. ಡ್ಯಾಂನಿಂದ ಮತ್ತಷ್ಟು ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಿದೆ.
ವಿವಿಧ ಜಲಾಶಯದಿಂದ ಮುನ್ನೆಚ್ಚರಿಕೆ ಕ್ರಮವಾಗಿ 15-30 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಬಿಡುಗಡೆ ಮಾಡಿದ್ದು, ಪ್ರಸ್ತುತ ಜಲಾಶಯದಿಂದ 15 ಸಾವಿರ ಕ್ಯೂಸೆಕ್ ಗೂ ಹೆಚ್ಚು ನೀರನ್ನು ಹೊರ ಬಿಡಲಾಗಿದೆ.
ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಆತಂಕವಿದ್ದು, ನದಿ ಪಾತ್ರದ ಜನರು ಆಸ್ತಿ-ಪಾಸ್ತಿ ರಕ್ಷಣೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ನದಿ ಅಂಚಿನ ಜನರು ಸರುಕ್ಷತಾ ಸ್ಥಳಕ್ಕೆ ತೆರಳುವಂತೆ ಮನವಿ ಮಾಡಲಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.


