Mysore
20
overcast clouds
Light
Dark

ಕೆಆರ್‌ಎಸ್‌ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿತವಾಗಿದೆ.

ಕಾವೇರಿ ಜಲಾನಯದ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.

ಈ ನಡುವೆ ಕೆಆರ್‌ಎಸ್‌ ಜಲಾಶಯದ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರಿನ ರಭಸಕ್ಕೆ ನಗುವನ ತೋಟದ ತಡೆಗೋಡೆ ಕೊಚ್ಚಿಹೋಗಿದೆ. ಡ್ಯಾಂನಿಂದ ನಿಧಾನವಾಗಿ ನೀರಿನ ಪ್ರಮಾಣ ಹೆಚ್ಚಿಸಿದ್ದರೆ ಯಾವುದೇ ತೊಂದರೆಯಾಗುತ್ತಿರಲಿಲ್ಲ. ಆದರೆ ಏಕಾಏಕಿ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಬಿಟ್ಟಿರುವುದರಿಂದ ತಡೆಗೋಡೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟರೆ ತಡೆಗೋಡೆ ಸಂಪೂರ್ಣ ಕುಸಿದು ಹೋಗುತ್ತದೆ. ಹೆಚ್ಚಿನ ಅನಾಹುತ ಆಗುವುದಕ್ಕಿಂತ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ತಡೆಗೋಡೆ ಕುಸಿತದಿಂದ ನೀರು ಕೂಡ ಕುಸಿತವಾದ ಸ್ಥಳಕ್ಕೆ ನುಗ್ಗುತ್ತಿದ್ದು, ಹೆಚ್ಚಿನ ಅನಾಹುತ ಆಗುವುದಕ್ಕಿಂತ ಮುಂಚೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.