ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ಜಲಾಶಯದ ಒಳಹರಿವಿನಲ್ಲೂ ಭಾರೀ ಇಳಿಕೆ ಕಂಡುಬಂದಿದೆ.
ಮಳೆ ಕಡಿಮೆಯಾಗಿ ಒಳಹರಿವು ಕಡಿಮೆಯಾದ ಪರಿಣಾಮ ಕೆಆರ್‌ಎಸ್‌ಜಲಾಶಯದಿಂದ ಹೊರಹರಿವನ್ನು ಕೂಡ ಕಡಿಮೆ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 50,000 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು ಕೂಡ 40,000 ಕ್ಯೂಸೆಕ್ಸ್‌ಗೆ ಇಳಿಕೆ ಮಾಡಲಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 124 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ.
ಜಲಾಶಯದಿಂದ ಹೊರಹರಿವು ಕಡಿಮೆಯಾಗುತ್ತಿದ್ದಂತೆ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಕೊಂಚ ನಿರಾಳರಾಗಿದ್ದಾರೆ. ನದಿಯ ಆರ್ಭಟ ನಿಂತರೂ ತಗ್ಗು ಪ್ರದೇಶಗಳಲ್ಲಿ ಕೆಸರು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಇನ್ನೆರಡು ದಿನಗಳಲ್ಲಿ ತಗ್ಗು ಪ್ರದೇಶದ ಜನರ ಜೀವನ ಯಥಾಸ್ಥಿತಿ ಆಗಲಿದ್ದು, ಜನತೆ ಮನೆಯ ಸ್ವಚ್ಛತೆ ಕಡೆ ಮುಖ ಮಾಡಿದ್ದಾರೆ.
ಇನ್ನು ಕೆಆರ್‌ಎಸ್‌ಜಲಾಶಯದಿಂದ ಹೊರಹರಿವನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದ ಪ್ರಸಿದ್ಧ ಪ್ರವಾಸಿ ತಾಣಗಳು ಕೂಡ ಈಗ ಶಾಂತ ರೂಪ ತಾಳಿವೆ. ಇನ್ನು ಮೂರು ದಿನಗಳಲ್ಲಿ ಕಾವೇರಿ ನದಿಯ ನೀರಿನ ಪ್ರಮಾಣ ಕಡಿಮೆಯಾದರೆ ಎಲ್ಲಾ ಪ್ರವಾಸಿ ತಾಣಗಳಿಗೂ ಕೂಡ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ.
ಶ್ರೀರಂಗಪಟ್ಟಣ ನಿಮಿಷಾಂಭ ದೇವಸ್ಥಾನದ ಆವರಣ ಕೂಡ ಕೆಸರಿನಿಂದ ಕೂಡಿದ್ದು, ಸ್ಥಳೀಯರು ಕೆಸರು ಸ್ವಚ್ಛ ಕಾರ್ಯದಲ್ಲಿ ತೊಡಗಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…