Mysore
21
overcast clouds

Social Media

ಬುಧವಾರ, 03 ಜೂನ್ 2026
Light
Dark

ಬೇಸಿಗೆ ಆರಂಭದಲ್ಲೇ 99 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ

KRS Dam

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ.

ರಾಜ್ಯದಲ್ಲಿ ಮುಂಗಾರು ಮಳೆ ತಡವಾದರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರನ್ನು ಅವಲಂಬಿಸಿರುವ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಆತಂಕ ಎದುರಾಗಿದೆ.

ಸದ್ಯ ಜಲಾಶಯದ ಇಂದಿನ ನೀರಿನ ಮಟ್ಟ 99 ಅಡಿಗೆ ತಲುಪಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಇದೆ. ಜಲಾಶಯದ ಇಂದಿನ ಒಳಹರಿವು 66 ಕ್ಯೂಸೆಕ್ಸ್‌ ಇದ್ದು, ಜಲಾಶಯದ ಇಂದಿನ ಹೊರಹರಿವು 4,033 ಕ್ಯೂಸೆಕ್ಸ್‌ ಇದೆ.

ಇನ್ನು ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದರೂ ಕೂಡ ಪ್ರಸ್ತುತ ಬೆಳೆದು ನಿಂತಿರುವ ಬೆಳೆಗಳಿಗೆ ಕಟ್ಟು ಪದ್ಧತಿಯಂತೆ ನೀರು ನೀಡಲಾಗುತ್ತಿದೆ.

Tags:
error: Content is protected !!