Mysore
30
overcast clouds

Social Media

ಗುರುವಾರ, 11 ಜೂನ್ 2026
Light
Dark

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.

ಜೂನ್‌ ತಿಂಗಳು ಅರ್ಧ ಕಳೆಯುತ್ತಿದ್ದರೂ ಸರಿಯಾಗಿ ಮಳೆ ಬಿದ್ದಿಲ್ಲ. ಪರಿಣಾಮ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ.

ಜಲಾಶಯದಲ್ಲಿ ಕೇವಲ 11 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದ್ದು, ಇದರಲ್ಲಿ 4 ರಿಂದ 5 ಟಿಎಂಸಿ ನೀರು ಡೆಡ್‌ ಸ್ಟೋರೇಜ್‌ ಆಗಿದೆ. ಬಳಕೆಗೆ ಲಭ್ಯವಿರುವುದು ಕೇವಲ 7 ಟಿಎಂಸಿ ಮಾತ್ರವಿದೆ.

ಈ ನಡುವೆ ಜೂನ್‌ ತಿಂಗಳಿನಲ್ಲೇ ತಮಿಳುನಾಡಿಗೆ ಸುಪ್ರೀಂಕೋರ್ಟ್‌ ಆದೇಶದಂತೆ ನೀರನ್ನು ಬಿಡುಗಡೆ ಮಾಡಬೇಕಾದ ಅನಿವಾರ್ಯತೆ ಇದ್ದು, ಮಳೆ ಬೀಳದೇ ಇದ್ದರೆ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗುವ ಎಲ್ಲಾ ಸಾಧ್ಯತೆ ಎದ್ದು ಕಾಣುತ್ತಿದೆ.

 

Tags:
error: Content is protected !!