ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಪರಿಣಾಮ ಕೆಆರ್ ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಯಾವ ಸಮಯದಲ್ಲಾದರೂ ೧೫ ಸಾವಿರದಿಂದ ೨೫ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡುವುದಾಗಿ ಕಾವೇರಿ ನೀರಾವರಿ ನಗಮ ಪ್ರಕಟಣೆಯಲ್ಲಿ ತಿಳಿಸಿದೆ.
ಈಗಾಗಲೇ ಕೆ.ಆರ್ ಎಸ್ ಜಲಾಶಯದಿಂದ ೧೧೬.೬೦ ಅಡಿ ಭರ್ತಿಯಾಗಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಕೇವಲ ೮ ಅಡಿ ಮಾತ್ರ ಬಾಕಿ ಇದೆ. ಇಂದು ಬೆಳಿಗ್ಗೆ ೪೪೬೧೭ ಕ್ಯೂಸೆಕ್ ನೀರು ಒಳಹರಿವು ಇತ್ತು. ಇದೀಗ ಒಳಹರಿವಿನ ಪ್ರಮಾಣದಲ್ಲಿ ಮತ್ತಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಇನ್ನು ಒಳಹರಿವಿನ ಪ್ರಮಾಣ ಹೆಚ್ಚಳವಾದ್ರೆ ೨೫ ಸಾವಿರ ಕ್ಯೂಸೆಕ್ ಗೂ ಅಧಿಕ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೀಗಾಗಿ ಕಾವೇರಿ ನದಿ ಪಾತ್ರದ ಜನರು ತಮ್ಮ ಆಸ್ತಿ ಪಾಸ್ತಿ, ಜಾನುವಾರುಗಳನ್ನ ರಕ್ಷಣೆ ಮಾಡಿಕೊಳ್ಳಬೇಕು ಅಲ್ಲದೆ ನದಿಗೆ ಯಾರು ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.