Mysore
20
overcast clouds
Light
Dark

KRS ಜಲಾಶಯದ ಸುತ್ತಮುತ್ತ ಕಟ್ಟೆಚ್ಚರ

ಮಂಡ್ಯ  : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ ಎಸ್‌ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ೧೨೪.೮೦ ಅಡಿ ಗರಿಷ್ಠ ಸಾಮರ್ಥ್ಯವಿರುವ ಜಲಾಶಯದಲ್ಲಿ ೧೨೦ ಅಡಿ ನೀರು ಇದೆ.

ಜಲಾಶಯದಿಂದ ನಾಲೆಗಳಿಗೆ ಹೊರಹರಿವು ಯಾವುದೇ ಕ್ಷಣದಲ್ಲಿ ಹೆಚ್ಚಾಗುವ ಸಂಭವವಿದ್ದು, ನಾಲೆ ಪಕ್ಕದಲ್ಲಿನ ಗ್ರಾಮಗಳು, ದೇವಸ್ಥಾನ, ರಸ್ತೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ಜನರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಅಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುತ್ತಿರುವುದರಿಂದ ಜಲಾಶಯದಿಂದ ಸುಮಾರು ೩೪ ಸಾವಿರದಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಹಾಗೂ ಈ ಪ್ರಮಾಣವು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ  ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ..