ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ೧೨೪.೮೦ ಅಡಿ ಗರಿಷ್ಠ ಸಾಮರ್ಥ್ಯವಿರುವ ಜಲಾಶಯದಲ್ಲಿ ೧೨೦ ಅಡಿ ನೀರು ಇದೆ.
ಜಲಾಶಯದಿಂದ ನಾಲೆಗಳಿಗೆ ಹೊರಹರಿವು ಯಾವುದೇ ಕ್ಷಣದಲ್ಲಿ ಹೆಚ್ಚಾಗುವ ಸಂಭವವಿದ್ದು, ನಾಲೆ ಪಕ್ಕದಲ್ಲಿನ ಗ್ರಾಮಗಳು, ದೇವಸ್ಥಾನ, ರಸ್ತೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ಜನರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಅಲ್ಲದೆ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುತ್ತಿರುವುದರಿಂದ ಜಲಾಶಯದಿಂದ ಸುಮಾರು ೩೪ ಸಾವಿರದಿಂದ 50 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಹಾಗೂ ಈ ಪ್ರಮಾಣವು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ..
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…