ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ ೧೦೦ ಅಡಿ ದಾಟಿದೆ. ಜಲಾಶಯವು ತುಂಬಿ ತುಳುಕುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.
ಕೆ.ಆರ್ ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ೪೯ ಟಿಎಂಸಿ ಸಾಮರ್ಥ್ಯ ಹೊಂದಿರುವ ಡ್ಯಾಂಗೆ ಈಗ ೧೫೦೦೦ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೆ.ಆರ್ ಎಸ್ ಜಾಲಾಶಯದಲ್ಲಿ ಸುಮಾರು ೨೩ ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿದೆ. ಹೀಗೆ ಹೆಚ್ಚಿನ ನೀರು ಜಾಲಾಶಯಕ್ಕೆ ಹರಿದು ಬರುತ್ತಿದ್ದರೆ ಕೆಲವೇ ದಿನಗಳಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗುವ ನಿರೀಕ್ಷೆ ಇದೆ.





