ಮಂಡ್ಯ

೧೦೦ ಅಡಿ ದಾಟಿದ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಕೆಆರ್‌ ಎಸ್‌ ಜಲಾಶಯದ ನೀರಿನ ಮಟ್ಟ ೧೦೦ ಅಡಿ ದಾಟಿದೆ. ಜಲಾಶಯವು ತುಂಬಿ ತುಳುಕುತ್ತಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.

ಕೆ.ಆರ್‌ ಎಸ್‌ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ೪೯ ಟಿಎಂಸಿ ಸಾಮರ್ಥ್ಯ ಹೊಂದಿರುವ ಡ್ಯಾಂಗೆ ಈಗ ೧೫೦೦೦ ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.  ಕೆ.ಆರ್‌ ಎಸ್‌ ಜಾಲಾಶಯದಲ್ಲಿ ಸುಮಾರು ೨೩ ಟಿಎಂಸಿ ಅಡಿಯಷ್ಟು ನೀರು ಸಂಗ್ರಹವಾಗಿದೆ.  ಹೀಗೆ ಹೆಚ್ಚಿನ ನೀರು ಜಾಲಾಶಯಕ್ಕೆ ಹರಿದು ಬರುತ್ತಿದ್ದರೆ ಕೆಲವೇ ದಿನಗಳಲ್ಲಿ ಡ್ಯಾಂ ಸಂಪೂರ್ಣ ಭರ್ತಿಯಾಗುವ ನಿರೀಕ್ಷೆ ಇದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

13 mins ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

17 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

35 mins ago

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…

1 hour ago

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

2 hours ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

5 hours ago