ts shrivathsa
ಮೈಸೂರು: ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಆರತಿ ಮಾಡಿದ ಹಾಗಾಗುತ್ತದೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 92 ಕೋಟಿ ರೂ ಖರ್ಚು ಮಾಡಿ ಕಾವೇರಿ ಆರತಿ ನಡೆಸುವ ಅವಶ್ಯಕತೆ ಇಲ್ಲ. ಈ ಮೂಲಕ ಸರ್ಕಾರ ನಾವು ಹಿಂದೂಗಳ ಪರವಾಗಿದ್ದೇವೆ ಎಂದು ತೋರಿಸಿಕೊಳ್ಳುತ್ತಿದೆ. ಕ್ಷೇತ್ರಗಳಲ್ಲಿ ರಸ್ತೆ ಸರಿಪಡಿಸಲು ಹಣವಿಲ್ಲ. ಒಬ್ಬೊಬ್ಬ ಶಾಸಕರು ಕೇವಲ 1 ಕೋಟಿ ಅನುದಾನಕ್ಕೆ ಬೇಡಿಕೊಳ್ಳುತ್ತಿದ್ದೇವೆ.
ಈಗಿರುವಾಗ ಕಾವೇರಿ ಆರತಿಗೆ 92 ಕೋಟಿ ಬಳಸುವ ಅವಶ್ಯಕತೆ ಇಲ್ಲ. ಕಾವೇರಿ ನದಿಯ ಪಕ್ಕದಲ್ಲಿ ಸ್ವಚ್ಛತೆ ವ್ಯವಸ್ಥೆ ಮಾಡಿದರೆ ಅದೇ ಕಾವೇರಿ ಆರತಿ ಮಾಡಿದ ಹಾಗೆ. ಹೀಗಾಗಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಮಾಡೋದಕ್ಕೆ ನಮ್ಮ ವಿರೋಧವಿದೆ ಎಂದರು.
ಇನ್ನು ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಘಟನೆ ಮನಸ್ಸಿಗೆ ಬಹಳ ನೋವು ನೀಡಿದೆ. ಪ್ರಕರಣ ಕುರಿತು ತನಿಖೆ ನಡೆಸಬಹುದು. ದೇಶದಲ್ಲಿ ಇದೊಂದು ದೊಡ್ಡ ದುರಂತವಾಗಿದೆ. ಮೃತರ ಕುಟುಂಬದವರು ಹೇಗೆ ನೋವು ತಡೆದುಕೊಳ್ಳುತ್ತಾರೋ ಗೊತ್ತಿಲ್ಲ. ಆ ಎಲ್ಲಾ ಕುಟುಂಬಗಳಿಗೂ ತಾಯಿ ಚಾಮುಂಡೇಶ್ವರಿ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.
ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…