KRS | Large Volume of Water Released into Cauvery River: Advisory Issued for Precaution
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣರಾಜಸಾಗರ (ಕೆ.ಆರ್.ಎಸ್) ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು 50000 ರಿಂದ 80000 ಕ್ಯೂಸೆಕ್ಸ್ ನೀರನ್ನು ಹೊರಬಿಡುವ ಸಾಧ್ಯತೆ ಇರುತ್ತದೆ.
ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸುವುದು. ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿಲಾಗಿದೆ.
ತಾಲ್ಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಸಾರ್ವಜನಿಕರು ಗಮನಿಸುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಕಿಂಗ್ ಸ್ಟಾರ್ ಯಶ್ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…