ಮಂಡ್ಯ

KRS | ಕಾವೇರಿ ನದಿಗೆ ಭಾರಿ ಪ್ರಮಾಣದ ನೀರು ಬಿಡುಗಡೆ : ಮುನ್ನೆಚ್ಚರಿಕೆ ವಹಿಸಲು ಸೂಚನೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕೃಷ್ಣರಾಜಸಾಗರ (ಕೆ.ಆರ್.ಎಸ್) ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು 50000 ರಿಂದ 80000 ಕ್ಯೂಸೆಕ್ಸ್ ನೀರನ್ನು ಹೊರಬಿಡುವ ಸಾಧ್ಯತೆ ಇರುತ್ತದೆ.

ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸುವುದು. ಕಾವೇರಿ ನದಿ ಪಾತ್ರಕ್ಕೆ ಅಥವಾ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಎಚ್ಚರಿಕೆ ವಹಿಸುವುದು. ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿಲಾಗಿದೆ.

ತಾಲ್ಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಸಾರ್ವಜನಿಕರು ಗಮನಿಸುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

10 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

12 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

12 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

16 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

21 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

21 hours ago