ಮಂಡ್ಯ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಅವರಿಗೆ ರಾಜ್ಯದಾದ್ಯಂತ ಏಳು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಉತ್ತರ ಬೃಂದಾವನದಲ್ಲಿರುವ ಸಂಗೀತ-ನೃತ್ಯ ಕಾರಂಜಿಯ ಪ್ರದರ್ಶನವನ್ನು ಸಹ ಬಂದ್ ಮಾಡಲಾಗಿದೆ.
ಜನವರಿ.1ರವರೆಗೂ ಕಾರಂಜಿ ಕಾರ್ಯಕ್ರಮ ಬಂದ್ ಆಗಲಿದ್ದು, ಅಲ್ಲಿಗೆ ತೆರಳುವ ಪ್ರವಾಸಿಗರು ಮಾಹಿತಿ ತಿಳಿದುಕೊಂಡು ಹೋಗುವಂತೆ ಸೂಚನೆ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಕೆಆರ್‌ಎಸ್‌ಗೆ ಹೋಗುವ ಪ್ರವಾಸಿಗರು ವಿಷಯ ತಿಳಿದು ಬೇರೆ ಸ್ಥಳಗಳಿಗೆ ಹೋಗಲು ಪ್ಲಾನ್ ಮಾಡಿದ್ದಾರೆ.
ಇನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಏಳು ದಿನಳ ಕಾಲ ಶೋಕಾಚರಣೆ ಆಚರಿಸಲು ಸರ್ಕಾರ ನಿರ್ಧಾರ ಮಾಡಿದ್ದರೂ ಕೆಆರ್‌ಎಸ್‌ನಲ್ಲಿ ಮಾತ್ರ ಅಧಿಕಾರಿಗಳು ಸಂಗೀತ ಕಚೇರಿ ನಡೆಸುವ ಮೂಲಕ ಮನಮೋಹನ್ ಸಿಂಗ್ ಅವರಿಗೆ ಅಗೌರವ ತೋರಿದ್ದರು.
ಈ ಸುದ್ದಿ ಎಲ್ಲಾ ಕಡೆ ಬಿತ್ತರವಾಗುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…