KRS releases water to canals
ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ.
ಜೂನ್ ತಿಂಗಳಿನಲ್ಲಿಯೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ ಬಂದಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ ಇಂದು ಬೆಳಿಗ್ಗೆಯೇ ನಾಲೆಗಳಿಗೆ ನೀರು ಹರಿಸಿದೆ.
ಮಂಡ್ಯ ಭಾಗದಲ್ಲಿ ಮುಂಗಾರು ಮಳೆ ಇದುವರೆಗೂ ಅಷ್ಟೇನು ಚುರುಕು ಪಡೆದುಕೊಂಡಿಲ್ಲ. ಪರಿಣಾಮ ಈ ಭಾಗದಲ್ಲಿ ರೈತರ ಬೆಳೆಗಳು ಒಳಗುತ್ತಿವೆ.
ಆದರೆ ಕೆಆರ್‌ಎಸ್ ಜಲಾಶಯ ತುಂಬಿದ್ದರೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಾಲೆಯ ಕಾಮಗಾರಿ ನೆಪ ಹೇಳಿ ನಾಲೆಗೆ ನೀರು ಬಿಟ್ಟಿರಲಿಲ್ಲ. ಈಗ ರೈತ ಸಂಘಟನೆಗಳು ನೀರು ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಇಂದು ಬೆಳಿಗ್ಗೆ ವಿಸಿ ನಾಲೆಯ ಮೂಲಕ ನಾಲೆಗಳಿಗೆ ನೀರು ಹರಿಸಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…