ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.
ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳೀನಲ್ಲೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದು, ಡ್ಯಾಂಗೆ ಸುಣ್ಣ ಬಣ್ಣ ಬಳಿಯುವ ಕಾರ್ಯ ಪ್ರಗತಿಯಲ್ಲಿದೆ.
ಮತ್ತೊಂದೆಡೆ ಡ್ಯಾಂ ಮೇಲೆ ಕನ್ನಡ ಬಾವುಟಗಳು ರಾರಾಜಿಸುತ್ತಿದ್ದು, ಜಲಾಶಯವನ್ನ ಮಧುವಣಗಿತ್ತಿಯಂತೆ ಸಿಂಗಾರ ಮಾಡಲಾಗುತ್ತದೆ.
ನಾಳೆ ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಬೆಳಿಗ್ಗೆ 11.30ರ ಅಭಿಜಿನ್ ಮುಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ.





