ಮಂಡ್ಯ

ಕೆಆರ್‌ಎಸ್‌ ಜಲಾಶಯ ಭರ್ತಿ: ಜುಲೈ 29 ರಂದು ಬಾಗಿನ ಸಮರ್ಪಣೆ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ ಕಾವೇರಿ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲ ಸಂಪನ್ಮೂಲ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದ ಹೆಚ್ ಡಿ ಕುಮಾರಸ್ವಾಮಿ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ, ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಹಾಗೂ ಜಿಲ್ಲಾಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು, ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮೈಸೂರು ಜಂಗಲ್ ಲಾಡ್ಜ್ ಅಧ್ಯಕ್ಷರಾದ ಸಿ.ಅನಿಲ್ ಕುಮಾರ್ ರವರು ಘನ ಉಪಸ್ಥಿತಿ ವಹಿಸಲಿದ್ದಾರೆ.

ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ ರಮೇಶ್ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್, ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ವಿವೇಕಾನಂದ, ಹೆಚ್ ವಿಶ್ವನಾಥ್, ಡಾ.ಡಿ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಡಾ. ಯತೀಂದ್ರ ಎಸ್, ವಿಧಾನಸಭಾ ಕ್ಷೇತ್ರದ ಶಾಸಕರುಗಳಾದ ನರೇಂದ್ರಸ್ವಾಮಿ ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜುನಾಥ್, ಕೆ.ಎಂ ಉದಯ್, ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಡಿ.ರವಿಶಂಕರ್, ಜಿ.ಡಿ ಹರೀಶ್‌ಗೌಡ, ದರ್ಶನ್ ಧೃವನಾರಾಯಣ, ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಯೀಮ್, ಮಂಡ್ಯ ಮೈಶುಗರ್ ಕಂಪನಿಯ ಅಧ್ಯಕ್ಷರಾದ ಸಿ.ಡಿ ಗಂಗಾಧರ್, ಮೈಸೂರು ಕಾವೇರಿ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ, ಕೆ.ಆರ್.ಎಸ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೃತಿ ಎಸ್. ಶ್ರೀನಿವಾಸ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಮರೀಗೌಡ ಅವರು ಭಾಗವಹಿಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಡಾ.ಎಸ್.ಸೆಲ್ವಕುಮಾರ್, ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಮೈಸೂರು ಪ್ರಾದೇಶಿಕ ಆಯಕ್ತ ಡಾ.ಜಿ.ಸಿ. ಪ್ರಕಾಶ್, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಶೇಖ್ ತನ್ವೀರ್ ಆಸೀಫ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

2 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

9 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

9 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

9 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

9 hours ago