Mysore
35
scattered clouds

Social Media

ಸೋಮವಾರ, 11 ಮೇ 2026
Light
Dark

ಕೆಆರ್‌ಎಸ್‌ ಜಲಾಶಯ ಭರ್ತಿ: ಇಂದು ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

KRS Reservoir Full: CM Siddaramaiah to Offer Baagina to River Cauvery Today

ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್‌ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ ತಿಂಗಳಿನಲ್ಲೇ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದು, ಜಲಾಶಯವನ್ನು ಮಧುವಣಗಿತ್ತಿಯಂತೆ ಸಿಂಗರಿಸಲಾಗಿದೆ.

ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇಂದು ಬೆಳಿಗ್ಗೆ 11.30ರ ಅಭಿಜಿನ್‌ ಮುಹೂರ್ತದಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಯಲಿದೆ.

Tags:
error: Content is protected !!