ಮಂಡ್ಯ

ಕೆಆರ್‌ಎಸ್‌ ಬಹುತೇಕ ಭರ್ತಿ : ಯಾವುದೇ ಕ್ಷಣದಲ್ಲಿ ಅಣೆಕಟ್ಟೆಯಿಂದ ನೀರು ಬಿಡುಗಡೆ

ಬೆಂಗಳೂರು : ನಿರಂತರ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದಲ್ಲಿ (KRS reservoir) ನೀರಿನ ಮಟ್ಟ 121 ಅಡಿಗೂ ಹೆಚ್ಚಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯವಿರುವ ಈ ಜಲಾಶಯಕ್ಕೆ ಒಳಹರಿವು 13,856 ಕ್ಯೂಸೆಕ್‌ನಷ್ಟು ಇದ್ದು ಸದ್ಯದಲ್ಲೇ ಭರ್ತಿಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಅಣೆಕಟ್ಟೆಯಿಂದ ಯಾವುದೇ ಕ್ಷಣದಲ್ಲಾದರೂ ನೀರು ಬಿಡುಗಡೆಯಾಗುವ ಮೂನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಕೇರಳ ಭಾಗದಲ್ಲಿ ಮುಂಗಾರು ಮಳೆ ವ್ಯಾಪಕ ಪ್ರಮಾಣದಲ್ಲಿ ಬೀಳುತ್ತಿದ್ದು, ಇದರಿಂದ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ. ಅದೇ ರೀತಿ ಜಲಾಶಯದ ಒಳಹರಿವು ನಿರಂತರವಾಗಿ ಏರಿಕೆಯಾಗುತ್ತಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ 94.57 ಅಡಿಯಷ್ಟು ಮಾತ್ರ ನೀರು ಸಂಗ್ರಹವಾಗಿತ್ತು. ಜೂನ್ ತಿಂಗಳಿನಲ್ಲೇ ಕಾವೇರಿ ಕೊಳ್ಳದ ಜಲಾಶಯಗಳು ಭರ್ತಿಯಾಗುವ ಸಾಧ್ಯತೆಗಳಿದ್ದು, ಕುಡಿಯುವ ನೀರು ಹಾಗೂ ರೈತರ ಬೆಳೆಗಳಿಗೆ ನೀರಿನ ಸಮಸ್ಯೆ ನಿವಾರಣೆಯಾದಂತಾಗಿದೆ. ಕಾವೇರಿ ಜಲಾನಯನ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳಿಗೆ ಒಳಹರಿವು ನಿರಂತರವಾಗಿದೆ.

ಆಂದೋಲನ ಪತ್ರಿಕೆಯಲ್ಲಿ ಡಿ ಉಮಾಪತಿ ಅವರ ಅಂಕಣ ಓದಲು ಮಿಸ್‌ ಮಾಡಿಕೊಂಡ್ರಾ.. ಹಾಗಾದ್ರೆ ಇಲ್ಲಿ ಓದಿ

ಹಾರಂಗಿ ಜಲಾಶಯ ಶೇ.74, ಹೇಮಾವತಿ ಶೇ.83, ಕಬಿನಿ ಜಲಾಶಯ ಶೇ.81ರಷ್ಟು ಭರ್ತಿಯಾಗಿದ್ದು, ಒಟ್ಟಾರೆ ನಾಲ್ಕೂ ಜಲಾಶಯಗಳಲ್ಲಿ ಶೇ.84ರಷ್ಟು ನೀರಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ದುಪ್ಪಟ್ಟು ನೀರಿನ ಸಂಗ್ರಹವಿದೆ. ಜಲವಿದ್ಯುತ್ ಉತ್ಪಾದಿಸುವ ಲಿಂಗನಮಕ್ಕಿ, ವರಾಹಿ, ಸೂಫ ಜಲಾಶಯಗಳಿಗೂ ಒಳಹರಿವು ಹೆಚ್ಚಾಗಿದೆ. ಈ ಮೂರು ಜಲಾಶಯಗಳಿಂದ 38 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಒಟ್ಟಾರೆ ಶೇ.31ರಷ್ಟು ಭರ್ತಿಯಾಗಿವೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

6 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

11 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

15 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

15 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

15 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

18 hours ago