ಮಂಡ್ಯ

ಕೆಆರ್‌ಎಸ್‌ ಜಲಾಶಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲು ಒಂದು ಅಡಿ ಬಾಕಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಯಾವುದೇ ಕ್ಷಣದಲ್ಲಾದರೂ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.

ಜಲಾಶಯದ ಒಳಹರಿವು 60,016 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 52,020 ಕ್ಯೂಸೆಕ್ಸ್‌ಗಳಿಗೆ ಏರಿಕೆಯಾಗಿದೆ. 124.80 ಅಡಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 123.20 ಅಡಿ ನೀರು ಸಂಗ್ರಹವಾಗಿದೆ.

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಕೆಆರ್‌ಎಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರಾದ ರಮೇಶ್‌ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ಕೆ.ಎಂ.ಉದಯ್‌, ದಿನೇಶ್‌ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್‌, ಜಿಲ್ಲಾ ಪಂಚಾಯಿತಿ ಸಿಬಿಓ ಶೇಖರ್‌ ತನ್ವೀರ್‌ ಆಸಿಫ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

3 mins ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

1 hour ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

1 hour ago

ಉಪಚುನಾವಣೆಯಲ್ಲಿ ಅಭಿವೃದ್ಧಿ ಹಾಗೂ ಗ್ಯಾರಂಟಿಗಳು ಕಾಂಗ್ರೆಸ್‌ಗೆ ನೆರವಾಗಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ದಾವಣಗೆರೆ: ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಗುಂಡ್ಲುಪೇಟೆ: ತ್ರಿವಿಧ ದಾಸೋಹಿ ಶ್ರೀ ಶಿವಕುಮಾರಸ್ವಾಮಿ ಜಯಂತಿ ಆಚರಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ…

2 hours ago

ಸಿದ್ಧಗಂಗಾ ಶ್ರೀಗಳ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…

3 hours ago