ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲು ಒಂದು ಅಡಿ ಬಾಕಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಯಾವುದೇ ಕ್ಷಣದಲ್ಲಾದರೂ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ.
ಜಲಾಶಯದ ಒಳಹರಿವು 60,016 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಹೊರಹರಿವು 52,020 ಕ್ಯೂಸೆಕ್ಸ್‌ಗಳಿಗೆ ಏರಿಕೆಯಾಗಿದೆ. 124.80 ಅಡಿ ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿಂದು 123.20 ಅಡಿ ನೀರು ಸಂಗ್ರಹವಾಗಿದೆ.
ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಕೆಆರ್‌ಎಸ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ್, ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪಂಚಾಯಿತಿ ಸಿಬಿಓ ಶೇಖರ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…