krs damm
ಮಂಡ್ಯ: ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ನವೆಂಬರ್‌ನಲ್ಲೇ 99 ಅಡಿಗೆ ಇಳಿದಿದ್ದು, ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಆತಂಕ ಮೂಡಿದೆ.
ಕಳೆದ ವಾರ 104 ಅಡಿಯಷ್ಟಿದ್ದ ನೀರಿನ ಮಟ್ಟ, ಒಂದೇ ವಾರದಲ್ಲಿ ಐದು ಅಡಿ ಕುಸಿದಿದೆ ಎಂದು ವರದಿಯಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ.
ಪ್ರಸ್ತುತ ಡ್ಯಾಂನಲ್ಲಿ ಒಟ್ಟು 22 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಲ್ಲಿ ಆರು ಟಿಎಂಸಿ ಡೆಡ್ ಸ್ಟೋರೇಜ್ ಆಗಿದ್ದು, ಬಳಕೆಗೆ ಲಭ್ಯವಿರುವುದು 16 ಟಿಎಂಸಿ ನೀರು ಮಾತ್ರ ಎಂದು ವರದಿ ತಿಳಿಸಿದೆ.
ಜಲಾಶಯದಿಂದ ನದಿ ಹಾಗೂ ನಾಲೆಗಳಿಗೆ ಒಟ್ಟು 7,884 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದರಲ್ಲಿ ಮೂರು ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಯುತ್ತಿರುವುದಾಗಿ ತಿಳಿಸಲಾಗಿದೆ.
ನೀರಿನ ಸಂಗ್ರಹ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿಯನ್ನು ಅವಲಂಬಿಸಿರುವ ಬೆಂಗಳೂರು, ಮೈಸೂರು ಹಾಗೂ ಮಂಡ್ಯದಲ್ಲಿ ಬೇಸಿಗೆ ವೇಳೆ ಕುಡಿಯುವ ನೀರಿನ ಪೂರೈಕೆ ಬಗ್ಗೆ ಆತಂಕ ವ್ಯಕ್ತವಾಗಿದೆ.
ಬೆಂಗಳೂರು: ರೈತರಿಗೆ ದೀಪಾವಳಿ ಹೊತ್ತಿನಲ್ಲಿ ಪರಿಹಾರದ ಸಿಹಿ ಸುದ್ದಿ. ಈ ಹಿಂದೆ ₹2,500 ಇದ್ದ ಬರ ಪರಿಹಾರವನ್ನು ಒಟ್ಟು ₹5,000ಕ್ಕೆ…
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನಲಾದ ವಿಡಿಯೋ ವೈರಲ್ ಪ್ರಕರಣದಲ್ಲಿ ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ…
ಚಿಕ್ಕಮಗಳೂರು: ಕಾಫಿನಾಡಿನ ಶಕ್ತಿದೇವತೆ ಬಿಂಡಿಗ ದೇವೀರಮ್ಮನ ದರ್ಶನಕ್ಕೆ ತೆರಳುವ ಭಕ್ತರೇ ಗಮನಿಸಿ… ಈ ಬಾರಿಯ ಜಾತ್ರಾ ಮಹೋತ್ಸವಕ್ಕೆ ಹೊಸ ನಿಯಮಗಳನ್ನು ಜಾರಿಗೆ…
ಕಟ್ಟಡ ನಿರ್ಮಾಣ ಕಾರ್ಮಿಕರು ದಿನ ನಿತ್ಯ ಕೂಲಿ ಕೆಲಸಕ್ಕಾಗಿ ೫೦ರಿಂದ ೮೦ ಕಿ.ಮೀ. ಪ್ರಯಾಣ ಮಾಡುತ್ತಾರೆ. ಬಹುತೇಕ ಕಾರ್ಮಿಕರ ಬಳಿ…
ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕ ಸೇರಿದಂತೆ ಒಟ್ಟಾರೆ ಐದು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಪರೀಕ್ಷೆ ಸಂಬಂಧ…
ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದರೊಂದಿಗೆ ಹಾಲಿನ ಬೆಲೆಯೂ ಹೆಚ್ಚಾಗಿರುವುದರಿಂದ ಹೋಟೆಲ್ ಮಾಲೀಕರು ಕಾಫಿ, ಟೀಗೆ…