ಮಂಡ್ಯ

೯೮ ಅಡಿ ತಲುಪಿದ ಕೆಆರ್‌ ಎಸ್‌ ಜಲಾಶಯದ ನೀರಿನ ಮಟ್ಟ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌ ಎಸ್‌ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಒಂದೇ ವಾರದಲ್ಲಿ ೧೧ ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಜಲಾಶಯದ ನೀರಿನ ಮಟ್ಟ ೯೮ ಅಡಿಗೆ ತಲುಪಿದೆ.

ಕಳೆದ ವಾರ ಕೆಆರ್ ಎಸ್ ಡ್ಯಾಂನ ನೀಡಿನ ಮಟ್ಟ ೮೭ ಅಡಿಗೆ ಕುಸಿದಿತ್ತು. ಪ್ರಸ್ತುತ ನಿರಂತರ ಮಳೆಯಿಂದ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಮಳೆ ಮತ್ತಷ್ಟು ಜೋರಾದ್ರೆ ಕೆಲವೇ ದಿನಗಳಲ್ಲಿ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ.

ಸದ್ಯ ಜಲಾಶಯದಲ್ಲಿ ಸುಮಾರು ೨೧೯೮೭ ಟಿಎಂಸಿ ನೀರು ಸಂಗ್ರಹವಾಗಿದೆ. ದಿನೇ ದಿನೇ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮದ್ದೂರು ಬಳಿಯ ವಳೆಗೆರೆಹಳ್ಳಿಯಲ್ಲಿ ಮಳೆರಾಯನಿಗಾಗಿ ಪೂಜೆ

ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…

9 hours ago

ಸಮರ್ಥವಾಗಿ ಕಾರ್ಯನಿರ್ವಹಿಸದ ಸಚಿವರನ್ನು ಬದಲಾಯಿಸಿ: ಶಾಸಕ ರವಿಕುಮಾರ್‌ ಗಣಿಗ

ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…

9 hours ago

ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು

ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್‌ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…

9 hours ago

ಹಾಸನ: ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…

9 hours ago

ಶಿವಮೊಗ್ಗ: ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ

ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…

9 hours ago

ಪಾಕ್‌ ಜನತೆಗೆ ಮತ್ತೊಂದು ಶಾಕ್:‌ ವಿದ್ಯುತ್‌ ದರ ದುಪ್ಪಟ್ಟು ಹೆಚ್ಚಳ

ಇಸ್ಲಾಮಾಬಾದ್:‌ ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್‌ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…

9 hours ago