ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್ ಎಸ್ ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಒಂದೇ ವಾರದಲ್ಲಿ ೧೧ ಅಡಿಯಷ್ಟು ಡ್ಯಾಂ ಭರ್ತಿಯಾಗಿದ್ದು, ಜಲಾಶಯದ ನೀರಿನ ಮಟ್ಟ ೯೮ ಅಡಿಗೆ ತಲುಪಿದೆ.
ಕಳೆದ ವಾರ ಕೆಆರ್ ಎಸ್ ಡ್ಯಾಂನ ನೀಡಿನ ಮಟ್ಟ ೮೭ ಅಡಿಗೆ ಕುಸಿದಿತ್ತು. ಪ್ರಸ್ತುತ ನಿರಂತರ ಮಳೆಯಿಂದ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಮಳೆ ಮತ್ತಷ್ಟು ಜೋರಾದ್ರೆ ಕೆಲವೇ ದಿನಗಳಲ್ಲಿ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ.
ಸದ್ಯ ಜಲಾಶಯದಲ್ಲಿ ಸುಮಾರು ೨೧೯೮೭ ಟಿಎಂಸಿ ನೀರು ಸಂಗ್ರಹವಾಗಿದೆ. ದಿನೇ ದಿನೇ ನೀರಿನ ಮಟ್ಟ ಹೆಚ್ಚಾಗುತ್ತಿರುವುದರಿಂದ ರೈತರ ಮೊಗದಲ್ಲಿ ಸಂತಸ ಮೂಡಿದೆ.