ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಜಲಾಶಯದ ಮಟ್ಟ 100 ಅಡಿಕ್ಕಿಂತ ಹೆಚ್ಚುವಾರಿಯಾಗಿರುವುದರಿಂದ ಜುಲೈ 6 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ, ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಕಳೆದ ಸಾಲಿನಲ್ಲಿ ಬರಗಾಲದ ಹಿನ್ನಲೆ ರೈತರ ಬೇಡಿಕೆಯಂತೆ ನೀರು ಹರಿಸಲು ಸಾಧ್ಯವಾಗಿರಲಿಲ್ಲ. ಜಲಾಶಯದಲ್ಲಿ ನೀರಿನ ಮಟ್ಟ 100 ಅಡಿ ತಲುಪಿದ ನಂತರ ನೀರು ಹರಿಸುವುದಾಗಿ ಭರವಸೆ ನೀಡಲಾಗಿತ್ತು. ವಿ.ಸಿ.ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದ್ದು, ರೈತರಿಗೆ ನೀರು ನೀಡಲು ತೊಂದರೆಯಾಗುತ್ತದೆ ಎಂದು ಹಲವಾರು ದೂರುಗಳು ಕೇಳಿ ಬಂದಿತ್ತು. ಇತ್ತೀಚೆಗೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಾಲೆಗಳಿಗೆ ನೀರು ಹರಿಸಲು ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲಾಗಿದೆ.
ಜುಲೈ 6 ರಂದು ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ಜುಲೈ 8 ರಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ರೈತರು ತಮ್ಮ ಕೃಷಿ ಚಟುವಟಿಕೆಗಳನ್ನು ಪ್ರಾರಂಭಿಸಿ ಕೊಂಡು ಉತ್ತಮ ಬೆಳೆ ಬೆಳೆಯಿರಿ. ರೈತರೊಂದಿಗೆ ಸರ್ಕಾರ ಸದಾ ಇದ್ದು, ಅವರ ಶ್ರೇಯೋಭಿವೃದ್ದಿಗೆ ಸದಾ ಚಿಂತಿಸುತ್ತದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…
ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…
ಬೆಂಗಳೂರು: ನಾಳೆ ನಟ ದರ್ಶನ್ ಅಭಿನಯದ ಡೆವಿಲ್ ಚಿತ್ರ ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್…
ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…
ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…
ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…