ಮಂಡ್ಯ

ಮಂಡ್ಯ | ಕೆ.ಎಸ್‌ ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ; ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿದ್ದೇನು ?

ಮಂಡ್ಯ : ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಜಿಲ್ಲೆಯ ಕೆ. ಎಸ್ ನರಸಿಂಹಸ್ವಾಮಿ ಅವರು ಒಬ್ಬರು. ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಶಾಶ್ವತವಾಗಿ ಉಳಿಸಿಕೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು.

ಇಂದು (ಎ.7) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಎಸ್ ನರಸಿಂಹಸ್ವಾಮಿ ಸ್ಮಾರಕ ನಿರ್ಮಾಣ ಮಾಡುವ ಸಂಬಂಧ ಸಭೆಯ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೆ. ಎಸ್ ನರಸಿಂಹಸ್ವಾಮಿ ಅವರ ಸ್ಮಾರಕ ನಿರ್ಮಾಣದ ಕುರಿತು ರಾಜ್ಯ ಮಟ್ಟದಲ್ಲಿ ಸಭೆಯನ್ನು ಆಯೋಜಿಸಿ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸುವಂತೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಸೂಚಿಸಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ಕೆ. ಎಸ್ ನರಸಿಂಹಸ್ವಾಮಿ ಅವರ ಮನೆಯು ಮಾರಾಟವಾಗಿದೆ, ಮನೆಯ ಮಾಲೀಕರು ಮನೆಯನ್ನು ಬಿಟ್ಟುಕೊಡಲು ತಯಾರಾಗಿದ್ದು ಮನೆಯ ಮಾಲೀಕರಿಗೆ ಪರ್ಯಾಯ ಸರ್ಕಾರಿ ಜಾಗ ನೀಡಿ ಕೆ.ಎಸ್. ನರಸಿಂಹಸ್ವಾಮಿ ಅವರ ಮನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹೆಸರಿಗೆ ಮಾಡಲಾಗುವುದು ಎಂದು ಹೇಳಿದರು.

ಕೆ. ಎಸ್ ನರಸಿಂಹಸ್ವಾಮಿ ಅವರ ಮನೆಯನ್ನು ಸ್ಮಾರಕವಾಗಿ ಪರಿವರ್ತಿಸಿ, ಅವರಿಗೆ ಸಂಬಂಧ ಪಟ್ಟ ಎಲ್ಲಾ ವಸ್ತುಗಳನ್ನು ಅಲ್ಲಿ ಶೇಖರಿಸಿ ಇಡಲಾಗುವುದು, ಕೆ. ಎಸ್ ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಸ್ಮಾರಕ ನಿರ್ವಹಣೆ ಮತ್ತು ಜವಾಬ್ದಾರಿಯನ್ನು ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಕೆ.ಎಸ್. ನರಸಿಂಹಸ್ವಾಮಿ ಬಯಲು ರಂಗಮಂದಿರ ಸ್ಥಾಪನೆ
ಕೆ . ಎಸ್. ನರಸಿಂಹಸ್ವಾಮಿ ಅವರ ಹೆಸರಿನಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುವುದು, ಮೇಲುಕೋಟೆ ಸಮೀಪದಲ್ಲಿ ಇರುವ ಸೂಕ್ತ ಸರ್ಕಾರಿ ಜಾಗ ಗುರುತಿಸಿ ಅಲ್ಲಿ ಕೆ.ಎಸ್. ನರಸಿಂಹಸ್ವಾಮಿ ರವರ ಹೆಸರಿನಲ್ಲಿ ಬಯಲು ರಂಗಮಂದಿರ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

ಕಿಕ್ಕೇರಿ ಕೆರೆ ಅಭಿವೃದ್ಧಿ ಹಾಗೂ ಮರುನಾಮಕರಣ
ಕಿಕ್ಕೇರಿ ಕೆರೆಯನ್ನು ಕೆ. ಎಸ್. ನರಸಿಂಹಸ್ವಾಮಿ ಸರೋವರವೆಂದು ಮರುನಾಮಕರಣ ಮಾಡಿ, ಕೆರೆಯಲ್ಲಿ ವಾಕಿಂಗ್ ಪಾರ್ಕ್, ದೀಪ ವ್ಯವಸ್ಥೆ ಹಾಗೂ ಮುಂತಾದ ಕ್ರಮಗಳ ಕುರಿತು ಡಿ.ಪಿ.ಆರ್ ಸಿದ್ಧಪಡಿಸಿ ನೀರಾವರಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದು ಹೇಳಿದರು.

ಸ್ವಾಗತ ಕಮಾನು
ಕೆ. ಎಸ್. ನರಸಿಂಹಸ್ವಾಮಿ ಅವರ ಸ್ಮಾರಕಕ್ಕೆ ಗ್ರಾಮ ಪಂಚಾಯಿತಿ ವತಿಯಿಂದ ಇರುವ ಅನುದಾನ ಉಪಯೋಗಿಸಿಕೊಂಡು ಸ್ವಾಗತ ಕಮಾನು ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇಷ್ಟೆಲ್ಲಾ ಕಾರ್ಯಾಗಳನ್ನು ಅಧಿಕಾರಿಗಳು ಶ್ರೀಘ್ರವಾಗಿ ಮಾಡಿ ಮುಗಿಸಬೇಕು, ಇಲ್ಲವಾದಲ್ಲಿ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಡಿ.ವಿ ನಂದೀಶ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ ಅಧ್ಯಕ್ಷ ಕಿಕ್ಕೇರಿ ಕೃಷ್ಣಮೂರ್ತಿ, ಕಾವೇರಿ ನಿರಾವರಿ ನಿಮಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ. ಮಂಜುನಾಥ್, ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ನ್ ಸದಸ್ಯರುಗಳಾದ ತಿಮ್ಮರಾಜು, ಶ್ರೀನಿವಾಸ್, ಡಾ. ಮೇಖಲಾ ವೆಂಕಟೇಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

9 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago