ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಆಲನಹಳ್ಳಿಯಿಂದ ಕೆ.ಆರ್.ಪೇಟೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಅದರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಕೆ.ಆರ್.ಪೇಟೆ ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿರುವ ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಈ ಪೈಕಿ ಬಸ್‌ನಲ್ಲಿ ಹೆಚ್ಚು ಶಾಲಾ ಮಕ್ಕಳೇ ಇದ್ದರು ಎನ್ನಲಾಗಿದ್ದು, ಘಟನೆಯಲ್ಲಿ ಅವರ ಕೈ ಹಾಗೂ ಕಾಲು ಮರಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





