ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಲದಲ್ಲೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಬಳಿ ನಡೆದಿದೆ.
ಮಳವಳ್ಳಿಯ ಮಂಚನಹಳ್ಳಿ ಗ್ರಾಮದ ದೊಡ್ಡಮಾದಯ್ಯ ಹಾಗೂ ನಾಗಸ್ವಾಮಿ ಎಂಬುವವರೇ ಮೃತ ದುರ್ದೈವಿಗಾಗಿದ್ದಾರೆ.
ಮೃತರಿಬ್ಬರು ಗ್ರಾಮದಿಂದ ಮಳವಳ್ಳಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳನ್ನು ರವಾನೆ ಮಾಡಲಾಗಿದೆ. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.